ಚಿತ್ರದುರ್ಗ: ಬೈಕ್‌ಗೆ (Bike) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಸದುರ್ಗ (Hosadurga) ತಾಲೂಕಿನ ಬೋಕಿಕೆರೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಸಿದ್ದಾಪುರ ಗ್ರಾಮದ ಪ್ರವೀಣ್ (26) ಹಾಗೂ ಹೊಸದುರ್ಗ ತಾಲೂಕಿನ ಕಡಿವಾಣಕಟ್ಟೆ ಗ್ರಾಮದ ಯೋಗೀಶ್ (27) ಮೃತ ದುರ್ದೈವಿಗಳು. ಹೊಸದುರ್ಗದಿಂದ ಸಿದ್ದಾಪುರಕ್ಕೆ ಬೈಕ್‌ನಲ್ಲಿ ತೆರಳುತ್ತಿರುವಾಗ ಅಪಾಘಾತ ಸಂಭವಿಸಿದೆ. ಇದನ್ನೂ ಓದಿ: ಮಿದುಳು ತಿನ್ನುವ ಅಮೀಬಾ ಸೋಂಕಿಗೆ ಪಾಕಿಸ್ತಾನದ ವ್ಯಕ್ತಿ ಬಲಿ
ಶನಿವಾರ ತಡರಾತ್ರಿ ಭೀಕರ ಅಪಘಾತ ನಡೆದಿದ್ದು, ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೃಷಿ ಹೊಂಡಕ್ಕೆ ಬಿದ್ದು ಮಾಜಿ ಪ್ರಿಯಕರನೊಂದಿಗೆ ವಿವಾಹಿತ ಯುವತಿ ಆತ್ಮಹತ್ಯೆ