ಬೆಂಗಳೂರು: ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಫ್ಲೈಓವರ್ (Fly Over) ಮೇಲಿನಿಂದ ಕೆಳಗೆ ಬಿದ್ದಿರುವ ಭೀಕರ ಅಪಘಾತ ನಗರದ ಯಶವಂತಪುರ ಸರ್ಕಲ್‌ನಲ್ಲಿ (Yashwantpur Circle) ನಡೆದಿದೆ.
ಬೈಕ್‌ನಲ್ಲಿದ್ದ ಇಬ್ಬರು, ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.ಇದನ್ನೂ ಓದಿ: ರಾತ್ರಿ ತರಬೇತಿ ಕಾರ್ಯಾಚರಣೆ ವೇಳೆ ವಾಯುಪಡೆಯ MiG-29 ಫೈಟರ್ ಜೆಟ್ ಪತನ – ಪೈಲಟ್ ಸೇಫ್
ಬೆಳಗ್ಗೆ 3:45ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಮಾರ್ಗವಾಗಿ ಬರುತ್ತಿದ್ದ ಕಾರು ವೇಗದ ಪರಿಣಾಮದಿಂದಾಗಿ ಫ್ಲೈಓವರ್ ಮೇಲಿನ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಬೈಕ್‌ಗೆ ಗುದ್ದಿದೆ. ಇದರಿಂದ ಫ್ಲೈಓವರ್ ಮೇಲಿನಿಂದ ಕಾರು ಕೆಳಗೆ ಬಿದ್ದಿದೆ.
ಚಾಲಕ ಕುಡಿದು ಕಾರು ಓಡಿಸಿರುವ ಶಂಕೆಯಿದ್ದು, ಕಾರು ಚಾಲಕನ ಅಜಾಗರೂಕತೆಯಿಂದಾಗಿ ಈ ಅವಘಡ ಸಂಭವಿಸಿದೆ. ಕಾರಿನಲ್ಲಿ ಖಾಲಿ ಮದ್ಯ ಬಾಟಲಿಗಳು ಪತ್ತೆಯಾಗಿದೆ. ತಮಿಳುನಾಡು ರಿಜಿಸ್ಟ್ರೇಷನ್ ಹೊಂದಿರುವ ವೊಕ್ಸ್ ವಾಗೇನ್ ವೆಂಟೋ (Volkswagen Vento) TN37DH9484 ಕಾರಿನಲ್ಲಿ 3 ಯುವಕರು ತೆರಳುತ್ತಿದ್ದರು.ಇದನ್ನೂ ಓದಿ: ಅಮೆರಿಕದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಾಖೆಯಲ್ಲಿ ಶ್ರಾವಣ ಅಮಾವಾಸ್ಯೆ ಆಚರಣೆ
ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ಗಾಯಾಳುಗಳನ್ನು ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ..