ತುಮಕೂರು: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ದೇವರ ದರ್ಶನ ಪಡೆದು ವಾಪಸ್ ಆಗುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು (Tumakuru) ಜಿಲ್ಲೆ ಕುಣಿಗಲ್ (Kunigal) ತಾಲೂಕಿನ ರಾಜ್ಯ ಹೆದ್ದಾರಿ 33 ಟಿ.ಎಂ ರಸ್ತೆ ಹೊನ್ನೇನಹಳ್ಳಿ ಚಿಗಣಿಪಾಳ್ಯ ಮಧ್ಯೆ ನಡೆದಿದೆ.
ಮಂಡ್ಯ ನಗರದ ವಾಸಿ ಕುಮಾರ್ ನರಸಿಂಹಸ್ವಾಮಿ (65), ಪತ್ನಿ ಕೆ.ಆರ್ ಗಾಯಿತ್ರಿ (60) ಮತ್ತೋರ್ವ ಗಾಯಿತ್ರಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಕುಮಾರ್ ನರಸಿಂಹಸ್ವಾಮಿ ಕುಟುಂಬದವರು ತುಮಕೂರಿನ ದೇವರಾಯನದುರ್ಗ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆದು ವಾಪಸ್ಸು ಮಂಡ್ಯಕ್ಕೆ ಹೊಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ನಾನು ಯಾವತ್ತೂ ಸಿಎಂ ಕನಸು ಕಂಡವನಲ್ಲ, ಜನರ ಪರವಾಗಿ ಕೆಲಸ ಮಾಡಿದ್ದೇನೆ: ಬಿಎಸ್‌ವೈ
ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ತೆರಳುತ್ತಿದ್ದ ಗೊಬ್ಬರ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಘಟನೆ ಸಂಬಂಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯಡಿಯೂರಪ್ಪರಂತಹ ನಾಯಕ ದಕ್ಷಿಣ ಭಾರತದಲ್ಲಿ ಯಾರೂ ಇಲ್ಲ: ಅಮಿತ್ ಶಾ ಬಣ್ಣನೆ

