ಧಾರವಾಡ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಧಾರವಾಡ (Dharwad) ತಾಲೂಕಿನ ವೆಂಕಟಾಪುರ ಬಳಿಯ ರಾಷ್ಟ್ರೀಯ (Car Accident) ಹೆದ್ದಾರಿಯಲ್ಲಿ ಬೆಳಗಿನ ಜಾವ ಸಂಭವಿಸಿದೆ.
ದಾವಣಗೆರೆ ಮೂಲದ ವಿನಾಯಕ್ (25), ಮಂಜುನಾಥ್ (29) ಹಾಗೂ ಬಸವರಾಜ (34) ಎಂಬುವವರು ಈ ಅಪಘಾತದಲ್ಲಿ ಸಾವನ್ನಪ್ಪಿದರೆ, ಅಭಿಷೇಕ, ಅಜಯ್ ಹಾಗೂ ಬಸನಗೌಡ ಎಂಬ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: Exclusive | ಹಬ್ಬಗಳ ಮಧ್ಯೆ ʻಸ್ವೀಟ್ ಬಾಂಬ್ʼ ಸ್ಫೋಟ – ಬಿಕಾನೇರ್ ಸ್ವೀಟ್ಸ್ ತಯಾರಿಕಾ ಘಟಕ ಜಪ್ತಿ
ರಾಷ್ಟ್ರೀಯ ಹೆದ್ದಾರಿ ಬಳಿಯ ದಾಬಾದಲ್ಲಿ ಊಟ ಮುಗಿಸಿ ಧಾರವಾಡ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಚಾಲಕ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸದ್ಯ ಮೂವರ ಶವಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಗಾಯಗೊಂಡವರನ್ನೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಬೆಳಗಾವಿ ಕಡೆಯಿಂದ ದಾವಣಗೆರೆಯತ್ತ ಹೊರಟಿತ್ತು ಎಂದು ಹೇಳಲಾಗಿದೆ.
ಸ್ಥಳಕ್ಕೆ ಗರಗ ಠಾಣೆ ಪಿಎಸ್ಐ ಪ್ರವೀಣ ಗಂಗೋಳ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಉಕ್ರೇನ್ ವಿರುದ್ಧದ ಯುದ್ಧ ಕೊನೆಗೊಳಿಸಲು ಬೇಕಾದ್ದನ್ನು ಮಾಡಲು ಭಾರತ ಸಿದ್ಧ – ಪುಟಿನ್‌ಗೆ ಮೋದಿ ಸಂದೇಶ
