Mangaluru | ಹೆದ್ದಾರಿ ತಡೆಗೋಡೆಗೆ ಕಾರು ಡಿಕ್ಕಿ – ಇಬ್ಬರು ಯುವಕರು ಸಾವು

Public TV
1 Min Read
Mangaluru Accident

ಮಂಗಳೂರು: ಹೆದ್ದಾರಿ ತಡೆಗೋಡೆಗೆ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ (Mangaluru) ಜಪ್ಪಿನಮೊಗರು (Jeppinamogaru) ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಎನ್‌ಎಸ್‌ಯುಐ ಮುಖಂಡ ಓಂ ಶ್ರೀ ಹಾಗೂ ಕದ್ರಿ ನಿವಾಸಿ ಅಮನ್ ರಾವ್ ಮೃತಪಟ್ಟಿದ್ದಾರೆ. ಅತಿವೇಗದ ಚಾಲನೆಯಿಂದ ಅಪಘಾತ ಸಂಭವಿಸಿದ್ದು, ಕಾರು ನಜ್ಜುಗುಜ್ಜಾಗಿದೆ. ಐವರು ಯುವಕರಿದ್ದ ಕಾರು ತಲಪಾಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಇದನ್ನೂ ಓದಿ: ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮತ್ತೆ ವಿಳಂಬ – ಜ್ವೆಜ್ಡಾ ಸೇವಾ ಮಾಡ್ಯೂಲ್‌ ದುರಸ್ತಿ ಬಳಿಕ ಮಿಷನ್ ಶುರು

ಘಟನೆಯಲ್ಲಿ ವಂಶಿ ಮತ್ತು ಆಶಿಕ್‌ಗೆ ಗಂಭೀರ ಗಾಯಗಳಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಬ್ಬ ಗೆಳೆಯ ಇಟಲಿ ಮೂಲದ ಜೆರ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತ ಇಬ್ಬರು ಯುವಕರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಘಟನೆ ಸಂಬಂಧ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯದ ಹಲವೆಡೆ ಮುಂದುವರಿದ ಮಳೆ – ಕರಾವಳಿಗೆ ಆರೆಂಜ್, ಉತ್ತರ ಒಳನಾಡಿನ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Share This Article