ಬೀಜಿಂಗ್: ಸೈಕಲ್ ಗುದ್ದಿದ ರಭಸಕ್ಕೆ ಕಾರೊಂದರ ಮುಂಭಾಗ ನಜ್ಜುಗುಜ್ಜಾಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಫೋಟೋ ನೋಡಿದ ನೆಟ್ಟಿಗರು ಇದು ಸುಳ್ಳು ಸುದ್ದಿಯಾಗಿದ್ದು, ಈ ರೀತಿ ಆಗಲು ಸಾಧ್ಯವಿಲ್ಲ ಎಂದು ಹೇಳಿ ಕಮೆಂಟ್ ಮಾಡುತ್ತಿದ್ದಾರೆ. ಆದರೆ ಅಪಘಾತ ನಿಜವಾಗಿ ನಡೆದಿದ್ದು ಪೊಲೀಸರೇ ಅಧಿಕೃತವಾಗಿ ವಿಡಿಯೋ ರಿಲೀಸ್ ಮಾಡಿ ಸ್ಪಷ್ಟಪಡಿಸಿದ್ದಾರೆ.
ನಡೆದಿದ್ದು ಎಲ್ಲಿ?
ದಕ್ಷಿಣ ಚೀನಾದ ಶೇನ್ಜೆನ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಸೈಕಲ್ ಸವಾರ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದ ಕಾರಣ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಸೈಕಲ್ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದ್ದು ಪಾರಾಗಿದ್ದಾನೆ.
ಈ ಫೋಟೋ ವೈರಲ್ ಆಗುತ್ತಿದ್ದಂತೆ ಮಾಧ್ಯಮಗಳು ಪೊಲೀಸ್ ಠಾಣೆಯನ್ನು ಸಂಪರ್ಕಿಸಿವೆ. ಈ ವೇಳೆ ಪೊಲೀಸರು ಅಪಘಾತ ನಡೆದ ಸ್ಥಳದ ವಿಡಿಯೋವನ್ನು ರಿಲೀಸ್ ಮಾಡಿದ್ದಾರೆ.
ನಾಯಿ ಕಚ್ಚಿದರೆ ಸುದ್ದಿಯಲ್ಲ, ಮನುಷ್ಯ ನಾಯಿಗೆ ಕಚ್ಚಿದರೆ ಸುದ್ದಿ ಎನ್ನುವಂತೆ ಈಗ ಸೈಕಲ್ ಗುದ್ದಿದ ರಭಸಕ್ಕೆ ಕಾರಿನ ಬಂಪರ್ ನಜ್ಜುಗುಜ್ಜಾಗಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv