ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಆಲ್ಟೋ ಕಾರು ಡಿಕ್ಕಿ ಹೊಡೆದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಈ ಅವಘಡ ಸಂಭವಿಸಿದೆ. ಕೇರಳ ಮೂಲದ ಆಲ್ಟೋ ಕಾರು ಮಂಗಳೂರು ಕಡೆಯಿಂದ ಚಿಕ್ಕಮಗಳೂರು ಬರುವಾಗ ಈ ದುರ್ಘಟನೆ ಸಂಭವಿಸಿದೆ.
Advertisement
Advertisement
ಒಂದು ವೇಳೆ ಡಿವೈಡರ್ ಇರದಿದ್ರೆ ಕಾರು ಅಂದಾಜು 300 ಅಡಿ ಆಳದ ಪ್ರಪಾತಕ್ಕೆ ಬೀಳುತ್ತಿತ್ತು. ಕಾರಿನ ಚಾಲಕ ಬದುಕುಳಿಯುವ ಸಂಭವ ತೀರಾ ಕಡಿಮೆ ಇರುತ್ತಿತ್ತು. ಆದರೆ ರಸ್ತೆಯಲ್ಲಿ ಡಿವೈಡರ್ ಇದ್ದಿದ್ರಿಂದ ಚಾಲಕ ಪಾರಾಗಿದ್ದಾನೆ.
Advertisement
ಕಾರು ಡಿವೈಡರ್ಗೆ ಗುದ್ದಿದ ರಭಸಕ್ಕೆ ಡಿವೈಡರ್ ಸಂಪೂರ್ಣ ಕಳಚಿ ಬಿದ್ದಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಆಲ್ಟೋ ಕಾರು ಅಪಘಾತವಾಗುವಾಗ ಎದುರಿನಿಂದಲೂ ಕೂಡ ಯಾವುದೇ ವಾಹನಗಳು ಬಂದಿಲ್ಲ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.