Connect with us

Districts

ಅತಿವೇಗಕ್ಕೆ ಕಾರು ಪಲ್ಟಿ- ಓರ್ವ ಸ್ಥಳದಲ್ಲೇ ಸಾವು

Published

on

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೊಬ್ಬ ಗಾಯಗೊಂಡಿರುವ ಘಟನೆ ಮೈಸೂರು – ಟಿ.ನರಸೀಪುರ ರಸ್ತೆಯಲ್ಲಿ ನಡೆದಿದೆ.

ನಾಗರಾಜ್ ಭಟ್ ಸಾವನ್ನಪ್ಪಿದ ದುರ್ದೈವಿ. ಚಾಲಕ ಪ್ರಫುಲ್ ಗಾಯಗೊಂಡು ಕೆ.ಆರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನಲ್ಲಿ ಮೈಸೂರಿನಿಂದ ಕೊಳ್ಳೇಗಾಲಕ್ಕೆ ನಾಗರಾಜ್ ಹಾಗೂ ಪ್ರಫುಲ್ ತೆರಳುತ್ತಿದ್ದರು. ಈ ವೇಳೆ ಮೈಸೂರು – ಟಿ.ನರಸೀಪುರ ರಸ್ತೆಯಲ್ಲಿ ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದಕ್ಕೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಟಿ. ನರಸೀಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Click to comment

Leave a Reply

Your email address will not be published. Required fields are marked *