ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರ ಕಾರೊಂದು (Car) ಸುಮಾರು 100 ಅಡಿ ಆಳದ ಕಂದಕಕ್ಕೆ ಬಿದ್ದಿರುವ ಘಟನೆ ಮೂಡಿಗೆರೆ (Mudigere) ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ (Charmadi Ghat) ನಡೆದಿದೆ.
ಕಾರು 100 ಆಳದ ಪ್ರಪಾತಕ್ಕೆ ಬಿದ್ದರೂ ಕಾರಿನಲ್ಲಿದ್ದ ಐವರು ಪವಾಡ ಸದೃಶ್ಯ ಪಾರಾಗಿದ್ದಾರೆ. ಆರು ಜನರ ಕುಟುಂಬ ಶಿವಮೊಗ್ಗದಿಂದ (Shivamogga) ಧರ್ಮಸ್ಥಳಕ್ಕೆ (Dharmasthala) ಧಾರ್ಮಿಕ ಪ್ರವಾಸ ಹೊರಟಿದ್ದರು. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಆರಂಭದಲ್ಲೇ ಮಲಯ ಮಾರುತ ಬಳಿ ಕಾರು, ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಕಾರಿನಲ್ಲಿದ್ದ ಶಂಕರ್, ಸೀತಮ್ಮ, ಭಾನುಪ್ರಿಯಾ, ಆರಾಧ್ಯ, ಹರೀಶ್, ಶ್ರೇಯಸ್ ಸೇರಿ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನಲ್ಲಿದ್ದ 2 ವರ್ಷದ ಮಗುವಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಮಗುವನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಸ್ನಾನಕ್ಕೆಂದು ಕಾಲುವೆಗೆ ತೆರಳಿದ್ದ ಬಾಲಕರು – ಕಾಲು ಜಾರಿ ಓರ್ವ ಸಾವು, ಇಬ್ಬರ ರಕ್ಷಣೆ
- Advertisement
ಸಮಾಜ ಸೇವಕ ಆರೀಫ್ ಕೂಡಲೇ ಸ್ಥಳಕ್ಕೆ ತೆರಳಿ ಎಲ್ಲರನ್ನೂ ಮೇಲೆತ್ತಿ ಆಂಬುಲೆನ್ಸ್‌ನಲ್ಲಿ ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಿದರು. ಈ ಜಾಗದಲ್ಲಿ ತಡೆಗೋಡೆ ಅಳವಡಿಸದೇ ಇರುವುದೇ ಅಪಾಯಕ್ಕೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ಸಂಭಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆನೇಕಲ್| ಪತ್ನಿ ದೇಹ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ ಪಾಪಿ ಪತಿ