– ಮೃತ ಕುಟುಂಬಕ್ಕೆ 4 ಲಕ್ಷ ರೂ. ಆರ್ಥಿಕ ಪರಿಹಾರ ಘೋಷಿಸಿದ ಯುಪಿ ಸಿಎಂ
ಲಕ್ನೋ: ಉತ್ತರ ಪ್ರದೇಶದ (Uttar Pradesh) ಬುಲಂದ್‌ಶಹರ್ (Bulandshahr) ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಕಾರು ಕಾಲುವೆಗೆ (Canal) ಬಿದ್ದ ಪರಿಣಾಮ ಕಾರಿನಲ್ಲಿದ್ದ ಎಂಟು ಮಂದಿಯ ಪೈಕಿ ಮೂವರು ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ.
Advertisement
ಜಹಾಂಗೀರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ (Car) ಐವರನ್ನು ಕಾಲುವೆಯಿಂದ ಮೇಲೆತ್ತಲಾಗಿದೆ. ಅದರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡವು ಘಟನಾ ಸ್ಥಳಕ್ಕೆ ತೆರಳಿದ್ದು, ನಾಪತ್ತೆಯಾಗಿರುವ ಮೂವರಿಗಾಗಿ ಶೋಧ ಕಾರ್ಯ ನಡೆಸುತ್ತಿದೆ. ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ಬರೆದು ದೇಶದ ಮಾನ ಕಳೀಬೇಡಿ – ಮಹಿಳಾ ಆಯೋಗದ ಮುಖ್ಯಸ್ಥೆ ತೀವ್ರ ಆಕ್ಷೇಪ
Advertisement
Advertisement
ಘಟನೆಯಲ್ಲಿ ಮೃತಪಟ್ಟ ಮೂವರು 18-22 ವರ್ಷದೊಳಗಿನವರಾಗಿದ್ದು, ಒಡಹುಟ್ಟಿದವರು ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ ಐದು ವರ್ಷದ ಮಗು ಹಾಗೂ ಇಬ್ಬರು ಪುರುಷರು ನಾಪತ್ತೆಯಾಗಿದ್ದಾರೆ. ಸದ್ಯ ಇಬ್ಬರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಮಸೀದಿ ಬಳಿಯಿರುವ ಭಗವಾಧ್ವಜ ತೆರವುಗೊಳಿಸಲು ಪ್ಲ್ಯಾನ್ ಆರೋಪ; ಮಾಜಿ ಶಾಸಕನ ವಿರುದ್ಧ ಕೇಸ್
Advertisement
ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಕೋ ಕಾರಿನಲ್ಲಿ ಒಟ್ಟು ಮಂದಿ ಅಲಿಗಢ್ ಪಿಸಾವಾಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಪಲ್ಟಿಯಾಗಿ ಕಾಲುವೆಗೆ ಉರುಳಿ ದುರಂತ ಸಂಭವಿಸಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್‌ನಲ್ಲಿ ವಿಶೇಷ ಟೀಂನಿಂದ 1,000 ಕ್ಕೂ ಅಧಿಕ ಸಿಸಿಟಿವಿ ಪರಿಶೀಲನೆ
ಈ ಕುರಿತು ಪ್ರತಿಕ್ರಿಯಿಸಿರುವ ಬುಲಂದ್‌ಶಹರ್ ಎಸ್‌ಎಸ್‌ಪಿ ಶ್ಲೋಕ್ ಕುಮಾರ್, ಕಾರು ಜಹಾಂಗೀರ್‌ಪುರ ಪೊಲೀಸ್ ಠಾಣೆಯ ಕಪ್ನಾ ಕಾಲುವೆಗೆ ಬಿದ್ದಿದೆ. ನಾಪತ್ತೆಯಾಗಿರುವ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಎನ್‌ಡಿಆರ್‌ಎಫ್ ತಂಡ ಸೇರಿದಂತೆ ಎಲ್ಲಾ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾತ್ರೋರಾತ್ರಿ ಇತಿಹಾಸ ಪ್ರಸಿದ್ಧ ಪಿಲಿಚಾಮುಂಡಿ ದೈವಸ್ಥಾನದ ನಿರ್ಮಾಣ ಹಂತದ ಭಂಡಾರಮನೆ ಧ್ವಂಸ
ಘಟನೆಯ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತ ಕುಟುಂಬಗಳಿಗೆ 4 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಇದನ್ನೂ ಓದಿ: ಹಣಕ್ಕಾಗಿ ತಾಯಿಯನ್ನು ಹತ್ಯೆಗೈದು ನೇಣಿಗೆ ಶರಣಾದ ಮಗ