ಶ್ರೀನಗರ: ನಿಯಂತ್ರಣ ತಪ್ಪಿ ಕಾರೊಂದು (Car) ಕಂದಕಕ್ಕೆ (Ditch) ಉರುಳಿದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ (Jammu Kashmir) ಪೂಂಚ್ (Poonch) ಜಿಲ್ಲೆಯಲ್ಲಿ ನಡೆದಿದೆ.
ಬುಧವಾರ ಸಂಜೆ ಸುರನ್‌ಕೋಟೆಯ ಶೆಲ್ಧಾರ್ ಪ್ರದೇಶದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಕಾರು ಏಕಾಏಕಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಕಂದಕಕ್ಕೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Shivamogga | ತುಂಗಾ ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು
ಅಪಘಾತದ ಮಾಹಿತಿ ಲಭ್ಯವಾಗುತ್ತಿದ್ದಂತೆ ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೂಂಚ್ ಜಿಲ್ಲಾಧಿಕಾರಿ ಅಶೋಕ್ ಕುಮಾರ್ ಶರ್ಮಾ ಮಾತನಾಡಿ, ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಗಂಗೊಳ್ಳಿಯಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿದ ಪರ್ಸಿನ್ ಬೋಟ್; ಮೀನುಗಾರರ ರಕ್ಷಣೆ
ಅಪಘಾತದಲ್ಲಿ ಮೃತಪಟ್ಟ ಆರು ಮಂದಿಯ ಮೃತದೇಹಗಳನ್ನು ಪೂಂಚ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರಲ್ಲಿ ನಾಲ್ವರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ಮೃತರ ವಯಸ್ಸು ಸುಮಾರು 20ರಿಂದ 25 ವರ್ಷಗಳ ನಡುವೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸಚಿವ ನಾಗೇಂದ್ರ ರಾಜೀನಾಮೆ ಕೊಡಲೇಬೇಕು: ನಿಖಿಲ್ ಕುಮಾರಸ್ವಾಮಿ
ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅಪಘಾತದ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ನಿಂತಿದ್ದ ಟಾಟಾ ಏಸ್‌ಗೆ ಬೈಕ್ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು
