ಡೆಹ್ರಾಡೂನ್: 11 ಪ್ರಯಾಣಿಕರಿದ್ದ ಕಾರು ನದಿಗೆ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ನಡೆದಿದೆ. ಕಾರಿನಲ್ಲಿದ್ದ ಕೇವಲ ಇಬ್ಬರನ್ನು ರಕ್ಷಿಸಲಾಗಿದೆ.
ರಾಮನಗರ ಕೋಟ್‌ದ್ವಾರ ರಸ್ತೆಯಲ್ಲಿರುವ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದ ಧೇಲಾ ವಲಯದಲ್ಲಿ ಘಟನೆ ನಡೆದಿದ್ದು, ಪ್ರಯಾಣಿಕರೆಲ್ಲರೂ ಪಂಜಾಬ್ ಮೂಲದವರು ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್), ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ. ಇದನ್ನೂ ಓದಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ – 10 ಮಂದಿಗೆ ಗಾಯ
Advertisement
Advertisement
ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ ಮುಂಜಾನೆ 5 ಗಂಟೆಯ ಹೊತ್ತಿಗೆ ಕಾರು ಕಾರ್ಬೆಟ್ ಕಡೆ ಹೋಗುತ್ತಿತ್ತು. ನದಿಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದ ಕಾರಣ ಕಾರು ಪ್ರವಾಹದೊಂದಿಗೆ ಕೊಚ್ಚಿಕೊಂಡು ಹೋಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಕನಸಿನ ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಸತೀಶ್ ಅಗ್ನಿಹೋತ್ರಿ ವಜಾ
Advertisement
ಎಲ್ಲಾ ಮೃತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ. ಘಟನೆಯಲ್ಲಿ ರಕ್ಷಿಸಲ್ಪಟ್ಟವರನ್ನು ರಾನಮಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆಯೂ ಆ ಪ್ರದೇಶದಲ್ಲಿ ಇಂತಹ ಘಟನೆಗಳು ನಡೆದಿತ್ತು ಎನ್ನಲಾಗಿದ್ದು, ಸೇತುವೆ ನಿರ್ಮಾಣದ ಕುರಿತು ಹಲವು ಬಾರಿ ಆಡಳಿತದಲ್ಲಿ ಚರ್ಚೆಯಾಗಿದೆ ಎನ್ನಲಾಗಿದೆ.