– ಜೀವದ ಹಂಗು ತೊರೆದು ದಂಪತಿಯನ್ನು ರಕ್ಷಿಸಿದ ಸ್ಥಳೀಯರು

ಚಿಕ್ಕಮಗಳೂರು: ಕಳಸ (Kalasa) ತಾಲೂಕಿನ ಗಣಪತಿ ಕಟ್ಟೆ ಬಳಿ ಕಾರೊಂದು ಸೋಮಾವತಿ ನದಿಗೆ (Somavati River) ಉರುಳಿ ಬಿದ್ದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು (Bengaluru) ಮೂಲದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಭಸದಿಂದ ಹರಿಯುತ್ತಿದ್ದ ನೀರಿನಲ್ಲಿ ಕಾರಿಗೆ ಬಂಡೆಯೊಂದು ಅಡ್ಡ ಸಿಕ್ಕಿದ್ದರಿಂದ ದಂಪತಿಯ ಜೀವ ಉಳಿದಿದೆ. ಬಂಡೆ ಅಡ್ಡ ಸಿಗದೇ ಇದ್ದಿದ್ದರೆ ಕಾರಿನ ಸಮೇತ ದಂಪತಿ ಕೊಚ್ಚಿ ಹೋಗುವ ಸಾಧ್ಯತೆ ಇತ್ತು. ಇನ್ನೂ ಕಾರು ನದಿಗೆ ಬೀಳುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಬಂದಿದ್ದಾರೆ. ಕಾರಿಗೆ ಹಗ್ಗ ಕಟ್ಟಿ ಮೇಲೆಳೆದು ದಂಪತಿಯ ಪ್ರಾಣ ರಕ್ಷಿಸಿದ್ದಾರೆ. ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ದೇವರಮನೆ ಬೆಟ್ಟದಲ್ಲಿ ಬೆಂಗಳೂರಿನ ಪ್ರವಾಸಿಗ ಹೃದಯಾಘಾತಕ್ಕೆ ಬಲಿ
3-4 ಅಪಘಾತ ನಡೆದ್ರೂ ಎಚ್ಚೆತ್ತುಕೊಳ್ಳದ ಸರ್ಕಾರ
ಸೋಮಾವತಿ ನದಿಗೆ ತಡೆಗೋಡೆ ಇಲ್ಲ. ಈಗಾಗಲೇ 3-4 ಅಪಘಾತಗಳು ಸಂಭವಿಸಿವೆ. ಈ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಉದ್ದಿನ ವಡೆಯಲ್ಲಿ ಹಲ್ಲಿ ಪತ್ತೆ – ತೋರಿಸಿದ ಪ್ರವಾಸಿಗರ ಮೇಲೆ ಜಗಳಕ್ಕೆ ಬಂದ ಹೋಟೆಲ್ ಮಾಲೀಕ
