ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವಿಗೀಡಾಗಿದ ಘಟನೆ ಅಂಬಳೆ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮೃತನನ್ನು ಗ್ರಾಮದ ದಿನೇಶ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಚಿಕ್ಕಮಗಳೂರಿಗೆ ಹೋಗಿ ಗ್ರಾಮಕ್ಕೆ ವಾಪಸ್ ಆಗುವ ವೇಳೆ ಈ ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನ ಒಳಗೆ ನೀರು ತುಂಬಿದ್ದು ಒಳಗಿದ್ದ ಚಾಲಕ ಕೋಡಲೇ ಹೊರಗೆ ಬಂದಿದ್ದು, ಮತ್ತೋರ್ವನಿಗೆ ಹೊರಗೆ ಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ.ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಮಳೆ – ಎಲ್ಲೆಲ್ಲಿ ಏನೇನು ಅವಾಂತರ?
ಕಳೆದ ಕೆಲವು ದಿನಗಳಿಂದ ಗ್ರಾಮದ ಸುತ್ತಮುತ್ತ ಮಳೆಯಾಗುತ್ತಿದ್ದು, ಕೆರೆಯಲ್ಲಿ ನೀರು ಏರಿಕೆಯಾಗಿತ್ತು. ಕೆರೆಯಿಂದ ಮೃತ ದೇಹ ಹಾಗೂ ಕಾರನ್ನು ಅಗ್ನಿಶಾಮಕ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ 7 ನಕ್ಸಲರು ಬಲಿ