ಮಂಡ್ಯ: ನಾಲೆಗೆ ಕಾರೊಂದು ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ (Mandya) ತಾಲೂಕಿನ ಬಿ.ಯರಹಳ್ಳಿ ಬಳಿಯ ವಿಸಿ ನಾಲೆಯಲ್ಲಿ (VC Canal) ನಡೆದಿದೆ.
ಬೆಳಗಿನ ಜಾವ 4:30ರ ಸುಮಾರಿಗೆ ಘಟನೆ ಸಂಭವಿಸಿದೆ. ಮಂಡ್ಯದ ಕಲ್ಲಹಳ್ಳಿ ನಿವಾಸಿ ಕೃಷ್ಣ ಎಂಬವರು ಕ್ರೇಟಾ ಕಾರು (Creta Car) ಚಲಾಯಿಸುತ್ತಿದ್ದರು. ಕಿರಿದಾದ ರಸ್ತೆ, ತಡೆಗೋಡೆ ಇಲ್ಲದ ಕಾರಣ ಅವಘಡ ಸಂಭವಿಸಿದೆ. ಕಾರು ನಾಲೆಗೆ ಬೀಳುತ್ತಿದ್ದಂತೆ ಚಾಲಕ ಕೃಷ್ಣ ಕಾರಿನಿಂದ ಹೊರಬಂದು ಜೀವ ಉಳಿಸಿಕೊಂಡಿದ್ದಾರೆ. ಇದನ್ನೂ ಓದಿ: ಮೈಸೂರು | ಅಪ್ರಾಪ್ತೆ ಗರ್ಭಿಣಿ – ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ!
ಸದ್ಯ ನಾಲೆಯಲ್ಲಿ ಮುಳುಗಿದ್ದ ಕಾರನ್ನು ಅಗ್ನಿಶಾಮಕ ಸಿಬ್ಬಂದಿ ಮೇಲೆತ್ತಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ನಾಳೆಯಿಂದ 3 ದಿನ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

