ಚೆನ್ನೈ: ಭಾನುವಾರ ತಮಿಳುನಾಡಿನ (Tamilnadu) ಕೊಯಮತ್ತೂರಿನಲ್ಲಿ (Coimbatore) ಕಾರಿನ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Cylinder Blast) 25 ವರ್ಷದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ನಡೆದಿತ್ತು. ಆದರೆ ಈ ಘಟನೆ ಇದೀಗ ಭಯೋತ್ಪಾದನೆಯ (Terrorism) ತಿರುವು ಪಡೆದುಕೊಂಡಿದೆ.
ನಿನ್ನೆ ಕೊಯಮತ್ತೂರಿನ ದೇವಾಲಯವೊಂದರ ಬಳಿ ಕಾರಿನ ಸಿಲಿಂಡರ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿ ಜೆಮಿಶಾ ಮುಬೀನ್ ಅವರ ಮನೆಯಲ್ಲಿ ಇದೀಗ ಪೊಲೀಸರು ಅಪಾರ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಹಚ್ಚಿದ್ದಾರೆ.
2019ರಲ್ಲಿ ಶ್ರೀಲಂಕಾದ ಈಸ್ಟರ್ ಸಂಡೇ ಸ್ಫೋಟದ ಮಾಸ್ಟರ್ ಮೈಂಡ್ ಜಹ್ರಾನ್ ಹಾಶಿಮ್‌ಗೆ ಸಂಬಂಧಿಸಿದ ಜಾಲದೊಂದಿಗೆ ಜೆಮಿಶಾ ಮುಬೀನ್ ಸಂಬಂಧ ಹೊಂದಿದ್ದ ಎನ್ನಲಾಗಿದ್ದು, ಆತನನ್ನು ಅಧಿಕಾರಿಗಳು ಈ ಹಿಂದೆ ವಿಚಾರಿಸಿದ್ದರು. ಇದೀಗ ಅದೇ ವ್ಯಕ್ತಿ ಸಿಲಿಂಡರ್ ಸ್ಫೋಟದಿಂದ ಸಾವನ್ನಪ್ಪಿದ್ದು, ಈ ಬಗ್ಗೆ ಭಯೋತ್ಪಾದನಾ ಸಂಚಿನ ಕೋನದಲ್ಲಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಸವಲಿಂಗ ಶ್ರೀಗಳ ಸಾವಿನ ಸುತ್ತ ಅನುಮಾನಗಳ ಹುತ್ತ – 3 ಪುಟಗಳ ಡೆತ್‍ನೋಟ್ ರಹಸ್ಯ ಬಯಲು!
ಘಟನೆಯ ಬಗ್ಗೆ ರಾಜ್ಯ ಪೊಲೀಸ್ ಮುಖ್ಯಸ್ಥ ಸಿ ಶೈಲೇಂದ್ರ ಬಾಬು ಅವರು ಮಾತನಾಡಿ, ತನಿಖೆಯಲ್ಲಿ ಉತ್ತಮ ಪ್ರಗತಿ ಕಂಡುಬಂದಿದೆ. ಈ ಘಟನೆಯ ಬಗ್ಗೆ ಎನ್‌ಐಎ ತನಿಖೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ತನಿಖೆ ಪೂರ್ಣವಾದ ಬಳಿಕ ನಿಜಾಂಶ ಏನೆಂಬುದು ತಿಳಿದುಬರಲಿದೆ ಎಂದಿದ್ದಾರೆ.
ಮುಬೀನ್ ಅವರನ್ನು ಈ ಹಿಂದೆ ಎನ್‌ಐಎ ವಿಚಾರಣೆ ನಡೆಸಿತ್ತು. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು