ಕೊಪ್ಪಳ: ರಸ್ತೆ ಬದಿಯ ಕಟ್ಟೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳದ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ಇಂದು ಮುಂಜಾನೆ ನಡೆದಿದೆ.
ಶಿವಲಿಂಗ(27) ಸ್ಥಳದಲ್ಲೇ ಸಾವನ್ನಪ್ಪಿದ ಚಾಲಕ. ಮೃತ ಚಾಲಕ ಧಾರವಾಡ ಜಿಲ್ಲೆಯ ಕುಂದುಗೊಳ ತಾಲೂಕಿನ ಅಲ್ಲಾಪುರದ ನಿವಾಸಿ ಎಂದು ತಿಳಿದುಬಂದಿದೆ. ಇನ್ನೂ ಕಾರಿನಲ್ಲಿದ್ದ ಉಳಿದ ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕುಷ್ಟಗಿ ತಾಲೂಕಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಅಪಘಾತ ಸ್ಥಳಕ್ಕೆ ತಾವರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.