ಮಂಗಳೂರು: ಫುಟ್‌ಪಾತ್‌ನಲ್ಲಿ (Footpath) ನಡೆದುಕೊಂಡು ಹೋಗುತ್ತಿದ್ದ ಐವರು ಹೆಣ್ಣುಮಕ್ಕಳ ಮೇಲೆ ಕಾರು ಹರಿದ ಪರಿಣಾಮ ಓರ್ವ ಯುವತಿ (Young Woman) ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಮಂಗಳೂರಿನ (Mangaluru) ಲೇಡಿಹಿಲ್‌ನಲ್ಲಿ (Lady Hill) ನಡೆದಿದೆ.
ರೂಪಶ್ರೀ (23) ಸಾವನ್ನಪ್ಪಿದ ಯುವತಿ. ಘಟನೆಯಲ್ಲಿ ಓರ್ವ ಬಾಲಕಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ವಾತಿ (26), ಹಿತನ್ವಿ (16), ಕಾರ್ತಿಕಾ (16) ಮತ್ತು ಯತಿಕಾ (12) ಎಂದು ಗುರುತಿಸಲಾಗಿದೆ. ಯುವತಿಯರು ಲೇಡಿಹಿಲ್‌ನ ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಇಯಾನ್ ಕಾರು ಇವರ ಮೇಲೆ ಹರಿದಿದೆ. ಇದನ್ನೂ ಓದಿ: ಭಕ್ತರನ್ನು ಹೊತ್ತು ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ – 17 ಮಂದಿಗೆ ಗಾಯ
ವೇಗವಾದ ಚಾಲನೆ ಮತ್ತು ಕಾರು ಚಾಲಕನ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ. ಯುವತಿಯರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕ ಕಮಲೇಶ್ ಬಲದೇವ್ ಬಳಿಕ ತಂದೆಯ ಜೊತೆ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೋರಮಂಗಲದ ಕಟ್ಟಡದಲ್ಲಿ ಬೆಂಕಿ ಅವಘಡ – ಪ್ರಾಣ ಉಳಿಸಿಕೊಳ್ಳಲು 4ನೇ ಮಹಡಿಯಿಂದ ಜಿಗಿದ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]