ಹಾವೇರಿ: ಇಂಡಿಕಾ ಕಾರು ಹರಿದ ಪರಿಣಾಮ ಸ್ಥಳದಲ್ಲಿಯೇ 28 ಕುರಿಗಳು ಮೃತಪಟ್ಟ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ ನಡೆದಿದೆ.
ಮೃತ ಕುರಿಗಳು ಕಾಕೋಳ ಗ್ರಾಮದ ಫಕೀರಪ್ಪ ಎಂಬವರಿಗೆ ಸೇರಿದ್ದು, ಕಾಕೋಳು ಗ್ರಾಮ ಸಮೀಪದ ರಾಷ್ಟ್ರೀಯ ಹೆದ್ದಾರಿ ರಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದ್ದು, 24 ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟಿವೆ.
ಫಕೀರಪ್ಪ ಅವರ ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಕುರಿಗಳು ಸಾವನ್ನಪ್ಪಿವೆ. ಅಪಾಘತದ ಬಳಿಕ ಕಾರು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.