ಮೈಸೂರು: ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಗರದ ಆಂದೋಲನ ಸರ್ಕಲ್ ಬಳಿಯ ರಿಂಗ್ ರೋಡ್ ಜಂಕ್ಷನ್ ಬಳಿ ನಡೆದಿದೆ.
ಮೃತರನ್ನು ಆಸಿಮ್(21), ಮೊಹಮ್ಮದ್ ಫರಾನ್(22) ಮತ್ತು ದಿವ್ಯಾ(20) ಎಂದು ಗುರುತಿಸಲಾಗಿದೆ. ಘಟನೆಯಿಂದಾಗಿ ರಿಯಾನ್ ವುಲ್ಲಾ ರೆಹಮಾನ್ ಮತ್ತು ಸ್ಪೂರ್ತಿ ಗೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
Advertisement
ಮೊಹಮ್ಮದ್ ಫರಾನ್ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಬಿ.ಕಾಂ ಪದವಿಯನ್ನು ವ್ಯಾಸಂಗ ಮಾಡುತ್ತಿದ್ದನು. ಹೀಗಾಗಿ ಈ ಐವರು ಪರೀಕ್ಷೆಯಲ್ಲಿ ಪಾಸ್ ಆಗಿದ್ದಕ್ಕೆ ಬುಧವಾರ ಮಧ್ಯಾಹ್ನ ಊಟ ಮಾಡಲು ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅತಿ ವೇಗವಾಗಿ ಕಾರು ಚಲಾಯಿಸುತ್ತಿದ್ದು, ರಿಂಗ್ ರೋಡ್ ಜಂಕ್ಷನ್ ಬಳಿ ಕಾರಿನ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿದೆ. ಪರಿಣಾಮ ಆಸಿಮ್, ಮೊಹಮ್ಮದ್ ಫರಾನ್ ಮತ್ತು ದಿವ್ಯಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Advertisement
ಈ ಘಟನೆ ಸಂಬಂಧ ಕುವೆಂಪುನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.