ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರ್

Public TV
0 Min Read
hsn car

ಹಾಸನ: ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರ್‍ವೊಂದು ಹೊತ್ತಿ ಉರಿದಿರುವ ಘಟನೆ ಹಾಸನದಲ್ಲಿ ನಡೆದಿದೆ.

ಬೇಲೂರು ತಾಲೂಕಿನ ಅಂದಲೆ ಗ್ರಾಮದ ಬಳಿ ತಡರಾತ್ರಿ ಈ ಘಟನೆ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೇಲೂರು ಹಾಸನ ರಸ್ತೆಯಲ್ಲಿ ರಾತ್ರಿ ಸಂಚರಿಸಿದ ಪ್ರಯಾಣಿಕರು ಪೊಲೀಸರಿಗೆ ವಿಷಯ ತಿಳಿಸಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಆದ್ರೆ ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ.

hsn 1

ಹಾಸನ ಆರ್ ಟಿಓ ನೊಂದಣಿಯ, ಮಹಿಂದ್ರಾ ಕಾರ್ ಇದಾಗಿದ್ದು ಮಾಲೀಕ ಯಾರು ಎನ್ನುವ ಕುರಿತ ತನಿಖೆ ಮುಂದುವರೆದಿದೆ. ಹಳೇಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

HSN CAR FIRE AV 1

HSN CAR FIRE AV 3

Share This Article
Leave a Comment

Leave a Reply

Your email address will not be published. Required fields are marked *