ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಕಾರಿಡಾರ್ ಹೈವೇಯಲ್ಲಿ (Chennai-Bengaluru Expressway) ಡಿವೈಡರ್‌ಗೆ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಆಂಧ್ರ ಮೂಲದ ವೈದ್ಯ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿ ಹಾದು ಹೋಗುವ ಚೆನ್ನೈ ಬೆಂಗಳೂರು ಎಕ್ಸ್‌ಪ್ರೆಸ್ ಕಾರಿಡಾರ್ ಹೈವೇಯಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಆಂಧ್ರ (Andhra Pradesh) ಮೂಲದ ವೈದ್ಯ (Doctor) ಕೃಷ್ಣ ಜಗನ್ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ 107 ವರ್ಷದ ದಾಖಲೆ ಮುರಿದ ಮಳೆ – 75 ವರ್ಷದಲ್ಲಿ ಮೊದಲ ಬಾರಿಗೆ ಅವಧಿ ಪೂರ್ವ ಮುಂಗಾರು
ಅನಂತಪುರದಿಂದ ಕುಪ್ಪಂ ಪಿಇಎಸ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಅಪಘಾತಕ್ಕೆ ಅತಿ ವೇಗದ ಚಾಲನೆಯೇ ಕಾರಣವೆಂದು ಮೇಲೋಟ್ನಕ್ಕೆ ಕಂಡು ಬಂದಿದೆ. ರಸ್ತೆ ಆರಂಭವಾಗುವ ಮುನ್ನವೇ ಬೆಂಗಳೂರು-ಚೆನ್ನೈ ಕಾರಿಡಾರ್ ರಸ್ತೆಯಲ್ಲಿ ಅಪಘಾತದ ಸಂಖ್ಯೆಗಳು ಹೆಚ್ಚಾಗಿ ಹಲವಾರು ಮಂದಿ ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಘಟನೆ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇದನ್ನೂ ಓದಿ: 6 ಗನ್‌ಮ್ಯಾನ್‌ಗಳೊಂದಿಗೆ ಪಾಕ್ ಬೀದಿಯಲ್ಲಿ ಜ್ಯೋತಿ ಸುತ್ತಾಟ- ಸ್ಫೋಟಕ ವಿಡಿಯೋ ಔಟ್