Connect with us

Crime

ಕಾರ್-ಟ್ಯಾಂಕರ್ ನಡುವೆ ಭೀಕರ ಅಪಘಾತ – ನಾಲ್ವರ ದುರ್ಮರಣ

Published

on

ಮಂಗಳೂರು: ಟವೇರಾ ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ಬ್ರಹ್ಮರಕೂಟ್ಲು ಟೋಲ್ ಗೇಟ್ ಬಳಿ ನಡೆದಿದೆ.

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಅಪಘಾತ ಸಂಭವಿಸಿದೆ. ಮೃತರೆಲ್ಲ ಭಟ್ಕಳ ಮೂಲದ ಒಂದೇ ಕುಟುಂಬಕ್ಕೆ ಸೇರಿದವರು ಎನ್ನುವ ಮಾಹಿತಿ ಲಭ್ಯವಾಗಿದೆ.

ಟವೇರಾ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಕುಟುಂಬ ಬರುತ್ತಿತ್ತು. ಆದರೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಬ್ರಹ್ಮರಕೂಟ್ಲು ಟೋಲ್ ಗೇಟ್ ಬಳಿ ಟ್ಯಾಂಕರ್ ಮತ್ತು ಕಾರ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.