ಕಾರುಗಳ ಮುಖಾಮುಖಿ ಡಿಕ್ಕಿ- ಇಬ್ಬರು ಚಾಲಕರು ಸಾವು

Public TV
1 Min Read
anekal hosuru accident

ಬೆಂಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಕಾರಿನ ಚಾಲಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಬಳಿ ನಡೆದಿದೆ.

anekal hosuru accident 2 2

ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಅಪಘಾತ ಸಂಭವಿಸಿದ್ದು, ಎರಡು ಕಾರಿನ ಚಾಲಕರಾದ ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್(21) ಹಾಗೂ ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇದನ್ನೂ ಓದಿ: ಕರಂದ್ಲಾಜೆ ಕಾರು ಅಡ್ಡಗಟ್ಟಿ ಕಪ್ಪುಪಟ್ಟಿ ಪ್ರದರ್ಶನ

anekal hosuru accident 2 1

ಹೆದ್ದಾರಿಯಲ್ಲಿ ಬರುತಿದ್ದ ಟಾಟಾ ಇಂಡಿಕಾ ಕಾರಿಗೆ ಎದಿರಿನಿಂದ ಬಂದ ಟೊಯೋಟಾ ಕಾರು ಡಿಕ್ಕಿಯಾದ ಪರಿಣಾಮ ಎರಡು ಕಾರಿನ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *