ಕಾಂಪೌಂಡ್‍ಗೆ ಕಾರು ಡಿಕ್ಕಿಯಾಗಿ ಚಾಲಕ ಸಾವು – ನಜ್ಜುಗುಜ್ಜಾದ ಕಾರ್

Public TV
1 Min Read
CKM 2

ಚಿಕ್ಕಬಳ್ಳಾಪುರ: ಕಾಂಪೌಂಡ್‍ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ನಡೆದಿದೆ.

ಸೋಮವಾರ ರಾತ್ರಿ ಗೌರಿಬಿದನೂರು ತಾಲೂಕಿನ ಇಡಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ 32 ವರ್ಷದ ವಿನೋದ್ ಮೃತ ವ್ಯಕ್ತಿ. ಮೃತ ವಿನೋದ್ ಬೆಂಗಳೂರಿನಲ್ಲಿ ಪೈಂಟ್ಸ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದನು. ಆದರೆ ಕೊರೊನಾ ಲಾಕ್‍ಡೌನ್‍ನಿಂದ ವಿನೋದ್ ಬೆಂಗಳೂರಿನಿಂದ ವಾಪಸ್ ಬಂದು ತನ್ನ ಸ್ವಗ್ರಾಮದಲ್ಲಿದ್ದನು.

CKB 1 3

ಸೋಮವಾರ ರಾತ್ರಿ ಗ್ರಾಮದಲ್ಲೇ ಕಾಂಪೌಂಡ್‍ಗೆ ಕಾರು ಡಿಕ್ಕಿಯಾಗಿ ವಿನೋದ್ ಮೃತಪಟ್ಟಿದ್ದಾನೆ. ಮದ್ಯ ಸೇವಿಸಿ ವಿನೋದ್ ಕಾರು ಚಲಾಯಿಸಿದ್ದ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *