ಮಾಗಡಿಯಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಒಂದೇ ಕುಟುಂಬದ ಐವರು ದುರ್ಮರಣ

Public TV
1 Min Read
Magadi Accident

ರಾಮನಗರ: ನಿಯಂತ್ರಣ ತಪ್ಪಿ ಕಾರು (Car) ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಾಗಡಿ (Magadi) ತಾಲೂಕಿನ ಭದ್ರಾಪುರ (Bhadrapura) ಗ್ರಾಮದ ಬಳಿ ನಡೆದಿದೆ.

ಕಾರು ಮಾಗಡಿಯಿಂದ ಬೆಂಗಳೂರಿಗೆ (Bengaluru) ತೆರಳುತ್ತಿದ್ದ ವೇಳೆ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮಾಗಡಿ ಮೂಲದ ಒಂದೇ ಕುಟುಂಬದವರು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಡೀಸೆಲ್ ಟ್ಯಾಂಕರ್, ಲಾರಿ ಡಿಕ್ಕಿ – ಇಬ್ಬರು ಟೋಲ್ ಸಿಬ್ಬಂದಿ ಸೇರಿ ಮೂವರಿಗೆ ಗಂಭೀರ ಗಾಯ

ಘಟನೆಯ ಬಳಿಕ ಮೃತದೇಹಗಳನ್ನು ಹೊರತೆಗದು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕುದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕುದೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ

Share This Article