Friday, 22nd February 2019

ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಮನೆಯ ಮೇಲೆ ಕಾರ್ ಪಲ್ಟಿ

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಯ ಮೇಲೆ ಬಿದ್ದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

ನಗರದ ಬೈತಖೋಲ ಬಂದರು ಪ್ರದೇಶದ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರವಾರ ಕಡೆಗೆ ಆಗಮಿಸುತ್ತಿತ್ತು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ತಗ್ಗಿನಲ್ಲಿದ್ದ ದಾಮೋದರ್ ಪಾಟೀಲ್ ಎಂಬವರ ಮನೆಯ ಮೇಲೆ ಪಲ್ಟಿಯಾಗಿದೆ.

ಕಾರಿನಲ್ಲಿದ್ದ ಚಾಲಕ ಅಪಾಯದಿಂದ ಪಾರಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಪಲ್ಟಿಯಾದ ರಭಸಕ್ಕೆ ಕಾರು ಜಖಂ ಆಗಿದ್ದು, ಮನೆ ಮೇಲಿನ ಛಾವಣಿ ಕೂಡ ಕುಸಿದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಾರವಾರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *