ಬೆಂಗಳೂರು: ಪಾದಚಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.
ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ನೆಲಮಂಗಲ ನಿವಾಸಿ ಕೆಂಪಣ್ಣ ಅವರಿಗೆ ಸೇರಿದ ಸ್ವಿಫ್ಟ್ ಕಾರ್ ಇದಾಗಿದೆ.
Advertisement
Advertisement
ಕಾರ್ ಬೆಂಗಳೂರಿನಿಂದ ತುಮಕೂರು ಕಡೆಗೆ ಹೋಗುತ್ತಿತ್ತು. ಈ ವೇಳೆ ತೊಣಚಿನಕುಪ್ಪೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರ್, ಪಾದಾಚಾರಿಗೆ ಡಿಕ್ಕಿ ಹೊಡೆಯಲು ಮುಂದಾಗಿದೆ. ಇದನ್ನು ತಪ್ಪಿಸಲು ಹೋದ ಸಂದರ್ಭದಲ್ಲಿ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿದೆ.
Advertisement
ಸದ್ಯ ಈ ಅವಘಡದಿಂದ ಕೂದಲೆಳೆಯ ಅಂತರದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಿಂದ ಕಾರು ತೆರವು ಮಾಡಿದ್ದಾರೆ. ಈ ಘಟನೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv