ಧಾರವಾಡ: ಧಾರವಾಡ-ಬೆಳಗಾವಿ ಬೈಪಾಸ್ ರಸ್ತೆಯಲ್ಲಿ (Dharwad Belagavi Bypass Road) ಪ್ರತಿದಿನ ಒಂದಿಲ್ಲೊಂದು ಅಪಘಾತಗಳು (Accident) ಸಂಭವಿಸಿ ಜನ ಸಾವನ್ನಪ್ಪುತ್ತಲೇ ಇದ್ದಾರೆ. ಮೊನ್ನೆಯಷ್ಟೇ ಬೈಕ್ ಅಪಘಾತವಾಗಿ ಇಬ್ಬರು ಸಾವನ್ನಪ್ಪಿದ್ದರು. ಘಟನೆ ಮಾಸುವ ಮುನ್ನವೇ ಇದೀಗ ಕಾರು ಪಲ್ಟಿಯಾಗಿ ಮತ್ತಿಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಧಾರವಾಡದಿಂದ ದಾಬಾಕ್ಕೆ ಊಟಕ್ಕೆಂದು ಹೋಗಿದ್ದ ವಿನಯ್ ಹಿರೇಮಠ (24) ಹಾಗೂ ಸಂದೀಪ್ (29) ದುರ್ಘಟನೆಯಲ್ಲಿ ಸಾವನ್ನಪ್ಪಿದವರು. ಊಟ ಮಾಡಿಕೊಂಡು ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರಿಂದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಇದನ್ನೂ ಓದಿ: 2 ವರ್ಷ ಕಳೆದ್ರೂ ಆಗದ ರಸ್ತೆ ರಿಪೇರಿ- ಗ್ರಾಮದ ಯುವಕರಿಗೆ ಹೆಣ್ಣು ಕೊಡಲು ಹಿಂದೇಟು
ಈ ಕಾರು ಪಲ್ಟಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ವಿಷವುಣಿಸಿ 18 ಶ್ವಾನಗಳ ಹತ್ಯೆ – ಬೆಂಗ್ಳೂರಲ್ಲೊಂದು ಅಮಾನವೀಯ ಘಟನೆ
Web Stories