ಮಂಡ್ಯ: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು (Car) ಪಲ್ಟಿಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಮಂಡ್ಯ (Mandya) ಜಿಲ್ಲೆ ನಾಗಮಂಗಲ (Nagamangala) ತಾಲೂಕಿನ ನಾಗತಿಹಳ್ಳಿಯಲ್ಲಿ ನಡೆದಿದೆ.
ಚಿಕ್ಕಮಗಳೂರು (Chikkamagaluru) ಮೂಲದ ಚನ್ನೆಗೌಡ (60), ಸರೋಜಮ್ಮ (55), ಜಯಮ್ಮ (70) ಮೃತ ದುರ್ದೈವಿಗಳು. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕಾರು ತೆರಳುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ತಿರುವಿನಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಗೋವಾ ನೈಟ್‌ಕ್ಲಬ್ ದುರಂತ – ತಾಳೆ ಎಲೆಗಳಿಂದ ಹೆಚ್ಚಿದ ಬೆಂಕಿ ತೀವ್ರತೆ: ಪ್ರತ್ಯಕ್ಷದರ್ಶಿ ಹೇಳಿದ್ದೇನು?
ಸದ್ಯ ಮೃತದೇಹವನ್ನು ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಟೀಂ ಇಂಡಿಯಾ ಏಕದಿನ ಸರಣಿ ಗೆದ್ದ ಬೆನ್ನಲ್ಲೇ ಸಿಂಹಾಚಲಂ ದೇವಸ್ಥಾನಕ್ಕೆ ಕೊಹ್ಲಿ ಭೇಟಿ

