ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು (Car) ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ (Nelamangala) ತಾಲೂಕಿನ ಕಂಬಾಳು (Kambalu) ಗ್ರಾಮದ ಬಳಿ ನಡೆದಿದೆ.
ಪವನ್, ದೀಪಕ್ ಮೃತರು. ಕಳೆದ ರಾತ್ರಿ ಸ್ನೇಹಿತನ ಹುಟ್ಟುಹಬ್ಬ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕೆರೆಯ ರಸ್ತೆಯಿಂದ ಚಾಲಕನ ನಿಯಂತ್ರಣ ತಪ್ಪಿ ಥಾರ್ ಜೀಪ್ ಗದ್ದೆಗೆ ಬಿದ್ದಿದೆ. ರಸ್ತೆಯಿಂದ ನಾಲ್ಕೈದು ಬಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ – ಬೆಂಬಲಿಗರಿಂದ ಬಾಗೇಪಲ್ಲಿ ಬಂದ್, ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
ಅತೀ ವೇಗದಿಂದ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಡಾಬಸ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ರಾಮನಗರ ಕರಗ ಉತ್ಸವದಲ್ಲಿ ʻಡಿ ಬಾಸ್ʼ, ʻಡಿ ಬಾಸ್ʼ ಘೋಷಣೆ – ಗರಂ ಆದ ಸಿಎಂ
