ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಭಾರೀ ಮಳೆ – ದತ್ತಪೀಠದಲ್ಲಿ ಕಾರು ಪಲ್ಟಿ, ತಪ್ಪಿದ ಭಾರೀ ಅನಾಹುತ

Public TV
1 Min Read
Chikkamagaluru Car Palti

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಗಾಳಿ, ಮಳೆಗೆ ದತ್ತಪೀಠದ (Dattapeeta) ಮಾರ್ಗದ ಕವಿಕಲ್ ಗಂಡಿ (Kavikal Gandi) ಬಳಿ ನಿಯಂತ್ರಣ ತಪ್ಪಿ ರಸ್ತೆಯ ತಿರುವಿನಲ್ಲಿ ಪ್ರವಾಸಿ ಕಾರೊಂದು ಪಲ್ಟಿಯಾಗಿದೆ.

ಎದುರಿನಿಂದ ಬರುತ್ತಿದ್ದ ಕಾರಿಗೆ ಸೈಡ್ ಕೊಡಲು ಹೋದ ಕಾರು, ಕಲ್ಲಿನ ಮೇಲೆ ಹತ್ತಿದ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ರಸ್ತೆ ಮಧ್ಯೆ ಕಾರು ಪಲ್ಟಿಯಾದ ಪರಿಣಾಮ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಸ್ತೆ ಮಧ್ಯೆ ಕಾರು ಪಲ್ಟಿಯಾಗುತ್ತಿದ್ದಂತೆ ಅಲ್ಲದೇ ಇದ್ದ ಪ್ರವಾಸಿಗರು ಪಲ್ಟಿಯಾದ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: Kolar | ಜಮೀನು ವಿವಾದ – ಅಣ್ಣಂದಿರಿಂದಲೇ ತಮ್ಮನ ಕೊಲೆ

ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕಾರಿನಲ್ಲಿದ್ದ ಐವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರು ಪಲ್ಟಿ ಹೊಡೆದ ಪಕ್ಕದಲ್ಲಿ ಪ್ರಪಾತ ಇರುವುದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಇದನ್ನೂ ಓದಿ: ಹುಬ್ಬಳ್ಳಿ | ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದ ಹೊತ್ತೊಯ್ದ ಪೋಷಕರು

ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ಸಂಭವಿಸಿದೆ. ಮಲೆನಾಡಲ್ಲಿ ಇತ್ತೀಚೆಗೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಸಾಕಷ್ಟು ಅನಾಹುತಗಳು ಸಂಭವಿಸುತ್ತಿವೆ. ಮಲೆನಾಡಿನಲ್ಲಿ ಸಂಚರಿಸುವ ಸ್ಥಳೀಯರು ಹಾಗೂ ಪ್ರವಾಸಿಗರು ತಿರುವಿನಲ್ಲಿ ವಾಹನಗಳನ್ನು ನಿಧಾನವಾಗಿ ಚಲಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ. ಇದನ್ನೂ ಓದಿ: Ahmedabad Tragedy | ಡಿಎನ್‌ಎ ಮ್ಯಾಚ್ – 3 ದಿನಗಳ ಬಳಿಕ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

Share This Article