ಚಿಕ್ಕಬಳ್ಳಾಪುರ: ಕೋವಿಡ್ ಕಾರಣದಿಂದ ವೀಕೆಂಡ್ ಲಾಕ್‍ಡೌನ್ ಆಗುತ್ತಿದ್ದ ವಿಶ್ವವಿಖ್ಯಾತ ನಂದಿಗಿರಿಧಾಮದ ನಿಯಮವನ್ನು ನಿನ್ನೆಯಿಂದ ತೆರವು ಮಾಡಲಾಗಿದೆ. ಹೀಗಾಗಿ ಸಹಜವಾಗಿ ವೀಕೆಂಡ್ ನಲ್ಲಿ ನಂದಿಗಿರಿಧಾಮಕ್ಕೆ ಬೆಳ್ಳಂಬೆಳಗ್ಗೆ ಸಾವಿರಾರು ಮಂದಿ ಆಗಮಿಸಿದ್ದಾರೆ.
Advertisement
ಪ್ರವಾಸಿಗರು ಕಾರು ಹಾಗೂ ಬೈಕ್‍ಗಳಲ್ಲಿ ನಂದಿಬೆಟ್ಟಕ್ಕೆ ಲಗ್ಗೆಯಿಟ್ಟಿದ್ದು, ನಂದಿಬೆಟ್ಟದಲ್ಲಿ ಕಾರು ಪಾರ್ಕಿಂಗ್ ಹೌಸ್ ಫುಲ್ ಆಗಿದೆ. ಅಂದಹಾಗೆ ನಿನ್ನೆಯಿಂದ ಬೆಟ್ಟದ ಮೇಲ್ಭಾಗದಲ್ಲಿ 300 ನಾಲ್ಕು ಚಕ್ರದ ವಾಹನಗಳು ಹಾಗೂ 1,000 ದ್ವಿಚಕ್ರ ವಾಹನಗಳ ಪಾರ್ಕಿಂಗ್ ಮಾಡಲು ಸ್ಥಳಾವಕಾಶವಿದ್ದು, ಅಷ್ಟು ವಾಹನಗಳಿಗೆ ಮಾತ್ರ ಬೆಟ್ಟದ ಮೇಲೆ ಪ್ರವೇಶ ನೀಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು ರಸ್ತೆಗೆ ಹೆವಿ ವೆಹಿಕಲ್‍ಗಳೇ ಕಂಟಕ- ಭಾರೀ ಗಾತ್ರದ ವಾಹನಗಳಿಂದ ರೂಲ್ಸ್ ಬ್ರೇಕ್
Advertisement
Advertisement
ಉಳಿದ ವಾಹನಗಳಿಗೆ ನಂದಿಬೆಟ್ಟದ ಚೆಕ್ ಪೋಸ್ಟ್ ಬಳಿಯೇ ತಡೆಯೊಡ್ಡಲಾಗಿದೆ. ಹೀಗಾಗಿ ಚೆಕ್ ಪೋಸ್ಟ್ ಬಳಿ ನೂರಕ್ಕೂ ಹೆಚ್ಚು ಕಾರುಗಳಲ್ಲಿ ಪ್ರವಾಸಿಗರು ಕಾಯುವಂತಾಗಿದೆ. ಮೇಲಿಂದ ವಾಹನ ವಾಪಸ್ ಬಂದ ನಂತರ ಮತ್ತೊಂದು ವಾಹನದ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.