ಚಿಕ್ಕೋಡಿ/ಬೆಳಗಾವಿ: ನಿಂತಿದ್ದ ಲಾರಿಗೆ ಆಲ್ಟೋ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ತಂದೆ-ಮಗ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಹೆಬ್ಬಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ನಡೆದಿದೆ. ಚಿಕ್ಕೋಡಿ ಪಟ್ಟಣದ ಪಂಚಾಕ್ಷರಿ ಕುಡಚಿಮಠ (56) ಮತ್ತು ಪುತ್ರ ರಕ್ಷಿತ್ ಕುಡಚಿಮಠ (20) ಮೃತ ದುರ್ದೈವಿಗಳು.
Advertisement
ತಂದೆ ಮತ್ತು ಮಗ ಇಬ್ಬರು ಒಟ್ಟಿಗೆ ಆಲ್ಟೋ ಕಾರಿನಲ್ಲಿ ಬೆಳಗಾವಿಯಿಂದ ಚಿಕ್ಕೋಡಿಗೆ ತೆರಳುತ್ತಿದ್ದರು. ಆದರೆ ಹೆಬ್ಬಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುತ್ತಿದ್ದಂತೆಯೇ ಕಾರು ನಿಯಂತ್ರಣ ಕಳೆದುಕೊಂಡು ನಿಂತಿದ್ದ ಲಾರಿಯ ಹಿಂಬದಿಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತಂದೆ ಮತ್ತು ಮಗ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Advertisement
ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.