ಬಳ್ಳಾರಿ: ಜಿಲ್ಲೆಯ ಹೊಸಪೇಟೆಯ ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಲಾಯಿಸುತ್ತಿದ್ದ ಯುವಕನನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದರು. ಆದರೆ ಆರೋಪಿ ಜಾಮೀನು ಪಡೆದು ಬಿಡುಗಡೆಯಾಗಿದ್ದಾನೆ. ಇದನ್ನೂ ಓದಿ: ‘ದೊಡ್ಡವರ ಆಕ್ಸಿಡೆಂಟ್’ಗೆ ಹೊಸ ಟ್ವಿಸ್ಟ್ ಕೊಡೋ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯ
Advertisement
ಆರೋಪಿ ರಾಹುಲ್‍ನನ್ನು ಬೆಂಗಳೂರಿನಲ್ಲಿ ಬಳ್ಳಾರಿ ಪೊಲೀಸರು ಬಂಧಿಸಿದ್ದರು. ಫೆಬ್ರವರಿ 10 ರಂದು ನಡೆದ ಅಪಘಾತದಲ್ಲಿ ಪಾದಚಾರಿ ಮರಿಯಮ್ಮನ ಹಳ್ಳಿ ತಾಂಡಾದ ರವಿ ನಾಯಕ್ ಮತ್ತು ಕಾರಿನಲ್ಲಿದ್ದ ಸಚಿನ್ ಇಬ್ಬರು ಮೃತಪಟ್ಟಿದ್ದರು. ಕಾರಿನಲ್ಲಿ ಪ್ರಭಾವಿ ಸಚಿವರ ಮಗ ಇದ್ದ ಎಂಬ ಅನುಮಾನಗಳಿದ್ದವು. ಈ ಕುರಿತು ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಬಳ್ಳಾರಿ ಅಪಘಾತ ಕೇಸ್‍ಗೆ ಹೊಸ ಟ್ವಿಸ್ಟ್ – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ವೈದ್ಯ
Advertisement
Advertisement
ಗುರುವಾರ ರಾತ್ರಿ ಸಂಡೂರು ಸಿಪಿಐ ಶೇಖರಪ್ಪ ನೇತೃತ್ವದ ತಂಡ ಬೆಂಗಳೂರಿಗೆ ತೆರಳಿತ್ತು. ಇಂದು ಒಬ್ಬನನ್ನು ಪೊಲೀಸ್ ಇಲಾಖೆ ಬಂಧಿಸಿತ್ತು. ಪ್ರಕರಣದ ಎಒನ್ ಆರೋಪಿ ರಾಹುಲ್ ಬಂಧನವಾಗಿದ್ದು, ಇಂದು ಮಧ್ಯಾಹ್ನ ಬೆಂಗಳೂರಿನಿಂದ ಬಳ್ಳಾರಿಗೆ ಪೊಲೀಸರು ಕರೆದುಕೊಂಡು ಬಂದಿದ್ದರು. ಆದರೆ ಆರೋಪಿ ರಾಹುಲ್ ಹೊಸಪೇಟೆ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾನೆ ಎಂದು ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
Advertisement
ಏನಿದು ಪ್ರಕರಣ?
ಕೆಎ-05, ಎಂಡಬ್ಲ್ಯು 357 ನಂಬರಿನ ಬೆಂಜ್ ಕಾರು ಬಳ್ಳಾರಿಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಇಬ್ಬರ ಬಲಿಯನ್ನು ತೆಗೆದುಕೊಂಡಿತ್ತು. ದುರ್ಗಾ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 50ರ ಸೇತುವೆ ಮೇಲಿನಿಂದ ವೇಗದಲ್ಲಿ ಬಂದ ಕಾರು ರಸ್ತೆ ಬದಿಯ ಚಹಾದ ಅಂಗಡಿ ಬಳಿ ನಿಂತಿದ್ದ ರವಿ ನಾಯಕ್(19) ಅವರಿಗೆ ಗುದ್ದಿದೆ. ನಂತರ ಕಾರು ಸುಮಾರು 100 ಮೀಟರ್ ದೂರದವರೆಗೆ ರವಿ ಅವರನ್ನು ಬೆಂಜ್ ಕಾರು ತಳ್ಳಿಕೊಂಡು ಹೋಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮತ್ತೀಕೆರೆ ನಿವಾಸಿ ಸಚಿನ್ ಮೃತಪಟ್ಟಿದ್ದಾರೆ.