ಕಾರು, ಟಿಟಿ ಮುಖಾಮುಖಿ ಡಿಕ್ಕಿ – ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವು

Public TV
1 Min Read
Chikkamagaluru accident

– 7 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಟಿಟಿ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ (Accident) ಪರಿಣಾಮ 3 ವರ್ಷದ ಮಗು ಸೇರಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಬರುವ ಮತಿಘಟ್ಟ ಗ್ರಾಮದಲ್ಲಿ ನಡೆದಿದೆ.

Chikkamagaluru accident 1

ಮೃತರನ್ನು ಮಯಾಂಕ್(3) ಹಾಗೂ ಗಿರಿಧರ್(46) ಎಂದು ಗುರುತಿಸಲಾಗಿದೆ. ಕಾರು ಹಾಗೂ ಟಿಟಿ ವಾಹನ ಡಿಕ್ಕಿಯಾದ ರಭಸಕ್ಕೆ ಟಿಟಿ ವಾಹನ ಕೂಡ ಪಲ್ಟಿಯಾಗಿದೆ. ಇದನ್ನೂ ಓದಿ: ಬಲೂನ್‌ನೊಂದಿಗೆ ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು 3ರ ಬಾಲಕಿ ಸಾವು

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಗಿರಿಧರ್ ಕುಟುಂಬ ಸಂಬಂಧಿಕರ ಮದುವೆಗೆಂದು ಹೋಗುತ್ತಿತ್ತು. ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿಟಿ ವಾಹನ ಮತಿಘಟ್ಟ ಗ್ರಾಮದ ಬಳಿ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಗಿರಿಧರ್ ಹಾಗೂ ಮಗು ಮಯಾಂಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟಿಟಿ ವಾಹನದಲ್ಲಿದ್ದ 7 ಜನರಿಗೂ ಗಾಯಗಳಾಗಿವೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ನಗರಸಭೆ ಸಹಾಯಕ ಎಂಜಿನಿಯರ್

Share This Article