ಡೆಹ್ರಾಡೂನ್: ಹರಿದ್ವಾರದ ಖರ್ ಖರಿ ಪ್ರದೇಶದಲ್ಲಿ ನೋಡ ನೋಡುತ್ತಿದ್ದಂತೆಯೇ ಪ್ರವಾಹದಲ್ಲಿ ಮಾರುತಿ ಕಾರೊಂದು ಕೊಚ್ಚಿ ಹೋಗಿದೆ.
ಪ್ರವಾಹದಿಂದಾಗಿ ಹರಿದ್ವಾರದ ಖರ್ ಖರಿ ಪ್ರದೇಶದಲ್ಲಿ ನಿಲ್ಲಿಸಿದ್ದ ಮಾರುತಿ ಕಂಪೆನಿಯ ಕಾರೊಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಪ್ರವಾಹದ ಪ್ರಮಾಣ ತಗ್ಗಿದ ಬಳಿಕ ಸ್ಥಳೀಯರ ಸಹಾಯದಿಂದ ಕಾರನ್ನು ಹೊರಕ್ಕೆ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಕಾರು ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
Advertisement
ಉತ್ತರಾಖಂಡ್ ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಬಹುತೇಕ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಅಲ್ಲದೇ ಇಂದಿನಿಂದ ಒಂದು ವಾರಗಳ ಕಾಲ ಹರಿದ್ವಾರ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
Advertisement
ಹರಿದ್ವಾರದ ಬಳಿ ಇರುವ ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ಸ್ಥಳೀಯರಲ್ಲಿ ಪ್ರವಾಹ ಭೀತಿ ಎದುರಾಗಿದೆ.
Advertisement
https://www.youtube.com/watch?v=HA44Fmg-tuo