ಮೈಸೂರು: ಮ್ಯಾಜಿಕಲ್ ಮ್ಯೂಸಿಕ ಕಂಪೋಸರ್ ಅರ್ಜುನ್ ಜನ್ಯ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ವೈದ್ಯರು, 2 ಗಂಟೆ ತಡವಾಗಿದ್ರೆ ಕೆಟ್ಟ ಪರಿಣಾಮ ಎದುರಿಸಬೇಕಿತ್ತು ಎಂದು ಹೇಳಿದರು.
ಅರ್ಜುನ್ ಅವರ ಆರೋಗ್ಯದ ಬಗ್ಗೆ ಅಪೋಲೋ ಹೃದ್ರೋಗ ತಜ್ಞ ಆದಿತ್ಯ ಉಡುಪ ಪ್ರತಿಕ್ರಿಯಿಸಿ, ಭಾನುವಾರ ಮಧ್ಯಾಹ್ನ ಅರ್ಜುನ್ ಜನ್ಯ ಅವರು ಗ್ಯಾಸ್ಟ್ರಿಕ್, ತಲೆ ನೋವು, ಎದೆ ನೋವು ಹಾಗೂ ಬೆನ್ನು ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಗ ನಾವು ಅವರಿಗೆ ಚಿಕಿತ್ಸೆ ನೀಡಿದಾಗ ಅವರ ಗ್ಯಾಸ್ಟ್ರಿಕ್ ಸಮಸ್ಯೆ ಸರಿ ಹೋಯಿತು. ಮಂಗಳವಾರ ರಾತ್ರಿ ಮತ್ತೆ ಅವರಿಗೆ ಇಸಿಜಿ ಮಾಡಿಸಿದಾಗ ವರದಿಯಲ್ಲಿ ಕೆಲವು ವ್ಯತ್ಯಾಸಗಳು ಕಂಡು ಬಂತು. ಅಲ್ಲದೆ ಅರ್ಜುನ್ ಅವರಿಗೆ ಬೆನ್ನು, ಎದೆ ಹಾಗೂ ತಲೆ ನೋವು ಜಾಸ್ತಿಯಾಗಿತ್ತು. ಹಾಗಾಗಿ ಮತ್ತೆ ಇಸಿಜಿ ಮಾಡಿಸಿದ್ದೇವು ಎಂದರು. ಇದನ್ನೂ ಓದಿ: ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಹೃದಯಾಘಾತ
Advertisement
Advertisement
ಇಸಿಜಿ ವರದಿ ಬಂದಾಗ ಅರ್ಜುನ್ ಅವರ ಬಳಿ ಹೋಗಿ ಆರೋಗ್ಯ ಹೇಗಿದೆ ಎಂದು ಕೇಳಿದ್ದೇವು. ಆಗ ಅವರು ಹೊಟ್ಟೆ ನೋವು ಕಡಿಮೆ ಆಗಿದೆ. ಆದರೆ ತುಂಬಾ ಬೆನ್ನು ಹಾಗೂ ತಲೆ ನೋವು ಇದೆ, ಸ್ವಲ್ಪ ಎದೆ ನೋವಾಗುತ್ತಿದೆ ಎಂದರು. ಇಸಿಜಿಯಲ್ಲಿ ಬಹಳ ವ್ಯತ್ಯಾಸ ಕಂಡಿದ್ದರಿಂದ ತಕ್ಷಣ ಆಂಜಿಯೋಗ್ರಾಂ ಪರೀಕ್ಷೆ ಮಾಡಿದ್ವಿ. ಆಗಲೇ ಶೇ. 99% ಹಾರ್ಟ್ ಬ್ಲಾಕೇಜ್ ಆಗಿದೆ ಎಂಬುದು ತಿಳಿಯಿತು. ತಕ್ಷಣ ಅವರ ಕುಟುಂಬಸ್ಥರು ಜೊತೆ ಮಾತನಾಡಿ ಆಂಜಿಯೋಪ್ಲ್ಯಾಸ್ಟಿ ಮಾಡಲಾಯಿತು. ಚಿಕಿತ್ಸೆ ನಡೆದ ಅವರು ಸಂಪೂರ್ಣ ನಿರಾಳರಾದರು ಎಂದು ಮಾಹಿತಿ ನೀಡಿದರು.
Advertisement
ಮಂಗಳವಾರ ಬೆಳಗ್ಗೆ 2.30ಕ್ಕೆ ಅರ್ಜುನ್ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಮಾಡಿದ್ದೇವೆ. ನಿಜವಾಗಿಯೂ 2 ಗಂಟೆ ತಡವಾಗಿದ್ರೆ ಕೆಟ್ಟ ಪರಿಣಾಮ ಎದುರಿಸಬೇಕಿತ್ತು. ಸದ್ಯ ಎಲ್ಲವು ಸರಿಯಾಗಿದೆ. ಚಿಕಿತ್ಸೆ ಪಡೆದು ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಿದ್ದೇವೆ. ಸದ್ಯಕ್ಕೆ ಅರ್ಜುನ್ ಜನ್ಯ ಕ್ಷೇಮವಾಗಿದ್ದಾರೆ ಎಂದು ಹೃದ್ರೋಗ ತಜ್ಞ ಆದಿತ್ಯ ಉಡುಪ ಹೇಳಿದ್ದಾರೆ.