– ಇರಾನ್ ಯುದ್ಧ ಶುರುವಾದ ಬಳಿಕ ರಾಜ್ಯಕ್ಕೆ ಬಂದ ಮೊದಲ ಹಡಗು
ಮಂಗಳೂರು: ನವಮಂಗಳೂರು ಬಂದರಿಗೆ (Mangaluru Port) 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತ ಖಾರ್ಗೋ ಹಡಗು ಆಗಮಿಸಿದೆ. ಇರಾನ್ ಹಾಗೂ ಇಸ್ರೇಲ್ ಯುದ್ಧ ಶುರುವಾದ ಬಳಿಕ ರಾಜ್ಯಕ್ಕೆ ಆಗಮಿಸಿದ ಮೊದಲ ಹಡಗು ಇದಾಗಿದೆ.
ಅಮೆರಿಕದ (America) ಟೆಕ್ಸಾಸ್‍ನಿಂದ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತ ಪಿಕ್ಸಿಸ್ ಪಯನೀರ್ ಎಂಬ ಹಡಗು ಮಂಗಳೂರಿನ ನವಮಂಗಳೂರು ಬಂದರಿಗೆ ಆಗಮಿಸಿದೆ. ಏಜೀಸ್ ಕಂಪನಿಗೆ ಎಲ್‍ಪಿಜಿಯನ್ನು ಈ ಹಡಗು ತಂದಿದೆ. ಇದನ್ನೂ ಓದಿ: ಚೀನಾಗೆ ತೆರಳುತ್ತಿದ್ದ ಟ್ಯಾಂಕರ್ ಯೂಟರ್ನ್ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು
ಮಾ.14 ರಂದು ಅಮೇರಿಕದಿಂದ ಪಿಕ್ಸಿಸ್ ಪಯಿನೀರ್ ಕಾರ್ಗೋ ಹಡಗು ಹೊರಟಿತ್ತು. ಇಂದು ಮಂಗಳೂರಿಗೆ ತಲುಪಿದ್ದು, ರಾಜ್ಯದಲ್ಲಿ ತಲೆದೂರಿರುವ ಸಿಲಿಂಡರ್ ಅಭಾವ ಪರಿಹಾರ ಆಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ಮಾರ್ಗದಲ್ಲಿ ಸುರಕ್ಷಿತ ತೈಲ ಸಾಗಣೆಗೆ 20ಕ್ಕೂ ಹೆಚ್ಚು ದೇಶಗಳ ಬೆಂಬಲ

