ಚಂಡೀಗಢ: ಮದುವೆ ಮುಗಿಸಿ ಹಿಂದಿರುಗುತ್ತಿದ್ದ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಹರಿಯಾಣದ ಕೈತಾಲ್‍ನಲ್ಲಿ ನಡೆದಿದೆ.
ಎರಡೂ ವಾಹನಗಳಲ್ಲಿದ್ದವರು ಮದುವೆ ಸಮಾರಂಭ ಮುಗಿಸಿ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು, 2 ವಾಹನಗಳು ಪರಸ್ಪರ ಡಿಕ್ಕಿಯಾಗಿವೆ. ಅಪಘಾತದಲ್ಲಿ 10 ಜನರಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬನ್ನಿ ದೇವೇಗೌಡ್ರೇ… ಇಲ್ಲಿ ಕುಳಿತುಕೊಳ್ಳಿ: ಪ್ರಧಾನಿ ಮೋದಿ
Advertisement
2 ಕಾರ್‌ನಲ್ಲಿ ನಲ್ಲಿ ಇದ್ದವರು ಮದುವೆ ಮುಗಿಸಿ ವಾಪಸ್ ಆಗುತ್ತಿದ್ದರು. ಈ ವೇಳೆ ರಸ್ತೆ ಅಪಘಾತವಾಗಿದೆ. 10 ಜನರ ಪೈಕಿ 6 ಮಂದಿ ಸಾವನ್ನಪಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ, ಜಿಟಿಡಿ ನಡುವಿನ ಹೊಸ ಲವ್ ಸಕ್ಸಸ್ ಆಗಲ್ಲ: ಎಸ್.ಟಿ. ಸೋಮಶೇಖರ್
Advertisement
Advertisement