ಲಕ್ನೋ: ಪಾಕಿಸ್ತಾನವನ್ನು ಹೊಗಳುವ ಹಾಡನ್ನು ಹಾಕಿದ ಇಬ್ಬರು ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಯುಪಿಯ ಬರೇಲಿಯಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಫೋನ್‍ನಲ್ಲಿ ಪಾಕಿಸ್ತಾನವನ್ನು ಹೊಗಳುವ ಹಾಡನ್ನು ಹಾಕಿಕೊಂಡಿದ್ದರು. ಈ ರೀತಿ ಮಾಡುವುದು ರಾಷ್ಟ್ರೀಯ ಏಕೀಕರಣಕ್ಕೆ ಅಡ್ಡಿಪಡಿಸಿದಂತೆ ಎಂಬ ಆರೋಪದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೈಕ್‍ಗೆ ಲಾರಿ ಡಿಕ್ಕಿ – ಫಾರ್ಮಾ ಕಂಪನಿ ನೌಕರ ಸಾವು
Advertisement
Advertisement
ಪಾಕಿಸ್ತಾನವನ್ನು ಹೊಗಳುವ ಹಾಡನ್ನು ಹಾಕಬೇಡಿ ಎಂದು ಆಕ್ಷೇಪ ವ್ಯಕ್ತಪಡಿಸಿದರೂ, ಅವರು ಮತ್ತೆ ಮತ್ತೆ ಅದೇ ಕೆಲಸ ಮಾಡುತ್ತಾರೆ ಎಂದು ಗ್ರಾಮಸ್ಥರಾದ ಆಶಿಶ್ ದೂರಿನಲ್ಲಿ ತಿಳಿಸಿದ್ದಾರೆ. ಈ ದೂರಿನ ಆಧಾರದ ಮೇರೆಗೆ ಇಬ್ಬರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಈ ವ್ಯಕ್ತಿಗಳು ಸಿಂಘೈ ಮುರಾವಾನ್ ಗ್ರಾಮದ ನಿವಾಸಿಗಳು ಎಂದು ಪೊಲೀಸರು ವಿವರಿಸಿರು.
Advertisement
ನಡೆದಿದ್ದೇನು?
ಆರೋಪಿಗಳು ಗ್ರಾಮದಲ್ಲಿ ಬೇರೆಯವರಿಗೂ ಕೇಳಿಸುವಂತೆ ಪಾಕಿಸ್ತಾನ್ ಹೊಗಳುವ ಹಾಡನ್ನು ಜೋರಾಗಿ ಹಾಕಿಕೊಂಡಿದ್ದಾರೆ. ಇದನ್ನು ಆಕ್ಷೇಪಿಸಿ ಆಶಿಶ್ ಪ್ರಶ್ನಿಸುತ್ತಾರೆ. ಈ ಹಿನ್ನೆಲೆ ಇಬ್ಬರ ನಡುವೆ ಜಗಳ ಪ್ರಾರಂಭವಾಗಿದೆ. ಘಟನೆಯ ವೀಡಿಯೋವನ್ನು ಫೋನ್‍ನಲ್ಲಿ ಸೆರೆಹಿಡಿಯಲಾಗಿದ್ದು, ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಳ್ಳಲಾಗಿದೆ.
Advertisement
ಇದು ಪೊಲೀಸರ ಗಮನಕ್ಕೂ ಬಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈ ವೀಡಿಯೋ ವೈರಲ್ ಆದ ಬಳಿಕ ಆಶಿಶ್ ಆರೋಪಿಗಳ ವಿರುದ್ಧ ದೂರನ್ನು ನೀಡಿದ್ದಾರೆ ಎಂದು ಬರೇಲಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜ್‍ಕುಮಾರ್ ಅಗರ್‍ವಾಲ್ ತಿಳಿಸಿದರು. ಇದನ್ನೂ ಓದಿ: ರಾಯಬಾಗದಲ್ಲಿ ಆರನೇ ವಾರಕ್ಕೆ ಕಾಲಿಟ್ಟ ‘ಕನ್ನೇರಿ’ ಚಿತ್ರ – ಪ್ರೇಕ್ಷಕರಿಂದ ಸಂಭ್ರಮಾಚರಣೆ
ರಾಷ್ಟ್ರೀಯ ಏಕೀಕರಣಕ್ಕೆ ಅಡ್ಡಿಪಡಿಸುವ ಕೃತ್ಯಗಳಿಗೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 153 ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.