ಗಾಂಧೀನಗರ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ‘ಮನ್ ಕಿ ಬಾತ್’ (Mann Ki Baat) ರೇಡಿಯೋ ಕಾರ್ಯಕ್ರಮದ 100 ಸಂಚಿಕೆಗಳಿಗೆ ಕೇಂದ್ರ ಸರ್ಕಾರ ಇದುವರೆಗೆ 830 ಕೋಟಿ ರೂ. ಹಣವನ್ನು ಖರ್ಚು ಮಾಡಿದೆ ಎಂದು ಟ್ವೀಟ್ ಮಾಡಿದ್ದ ಆಮ್ ಆದ್ಮಿ ಪಕ್ಷದ (AAP) ಗುಜರಾತ್ ಅಧ್ಯಕ್ಷ ಇಸುದನ್ ಗಧ್ವಿ (Isudan Gadhvi) ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇಸುದನ್ ಗಧ್ವಿ ಅವರು ಯಾವುದೇ ಆಧಾರಗಳಿಲ್ಲದೆ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ. ಈ ವಿಚಾರ ತಿಳಿದು ಬಂದ ತಕ್ಷಣವೇ ಶನಿವಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಏಪ್ರಿಲ್ 26 ರಂದು ಟ್ವೀಟ್ ಮಾಡಿದ್ದ ಗಧ್ವಿ, ಮನ್ ಕಿ ಬಾತ್‌ನ 1 ಸಂಚಿಕೆಗೆ 8.3 ಕೋಟಿ ರೂ. ವೆಚ್ಚವಾಗುತ್ತದೆ. ಹಾಗಾದರೆ ಕೇಂದ್ರ ಇದುವರೆಗೆ ಮನ್ ಕಿ ಬಾತ್‌ನ 100 ಸಂಚಿಕೆಗಳಿಗೆ 830 ಕೋಟಿ ರೂ. ಖರ್ಚು ಮಾಡಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ನಾಲಾಯಕ್ ಹೇಳಿಕೆ – ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ BJP ದೂರು
Advertisement
ಈ ಟ್ವೀಟ್ ಗಮನಕ್ಕೆ ಬರುತ್ತಿದ್ದಂತೆ ಅಹಮದಾಬಾದ್ ಸೈಬರ್ ಕ್ರೈಂ ಬ್ರಾಂಚ್ ಭಾರತೀಯ ದಂಡಸಂಹಿತೆ (ಐಪಿಸಿ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಏಪ್ರಿಲ್ 29ರಂದು ಗಧ್ವಿ ವಿರುದ್ಧ ಎಫ್‌ಐಆರ್ ದಾಖಲಿಸಿದೆ ಎಂದು ಸೈಬರ್ ಕ್ರೈಂ ಸಹಾಯಕ ಪೊಲೀಸ್ ಆಯುಕ್ತ ಜೆಎಂ ಯಾದವ್ ತಿಳಿಸಿದ್ದಾರೆ.
Advertisement
ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದ 100ನೇ ಸಂಚಿಕೆ ಭಾನುವಾರ ಪ್ರಸಾರವಾಯಿತು. ಇದೀಗ ಗಧ್ವಿ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿರುವುದಕ್ಕೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ, ಇಂತಹ ಸುಳ್ಳು ಎಫ್‌ಐಆರ್‌ಗಳ ಮೂಲಕ ಆಡಳಿತಾರೂಢ ಬಿಜೆಪಿ ತನ್ನ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ, ಬಿಜೆಪಿ ಸರ್ಕಾರ ಲೂಟಿ ಮಾಡಿರುವ ಹಣವನ್ನ ಜನರಿಗೆ ವಾಪಸ್ ಕೊಡ್ತೀವಿ – ರಾಗಾ