ಪಾಟ್ನಾ: ಬಿಹಾರ ಸರ್ಕಾರದ ವಿಜಿಲೆನ್ಸ್ ಇನ್ವೆಸ್ಟಿಗೇಶನ್ ಬ್ಯೂರೋ ಬ್ಲಾಕ್ ಮಟ್ಟದ ಅಧಿಕಾರಿಯೊಬ್ಬರ ವಿರುದ್ಧ ತನ್ನ ಆದಾಯಕ್ಕಿಂತ 8 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಗಳಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದೆ.
Advertisement
ಜಾಗೃತ ದಳದ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಮೇರೆಗೆ ಪಾಟ್ನಾ ಮತ್ತು ಮೋತಿಹಾರಿಯಲ್ಲಿರುವ ಅಧಿಕಾರಿಯ ಎರಡು ನಿವಾಸಗಳ ಮೇಲೆ ದಾಳಿ ಮಾಡಿದ್ದು, ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ 1.75 ಕೋಟಿ ನಗದು, 48 ಲಕ್ಷ ಮೌಲ್ಯದ 2.2 ಕೆಜಿ ಚಿನ್ನ ಮತ್ತು ಬೆಳ್ಳಿ ಆಭರಣಗಳು, 42 ರಾಷ್ಟ್ರೀಕೃತ ಬ್ಯಾಂಕುಗಳ ಪಾಸ್‍ಬುಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಲವ್ ಇದ್ಮೇಲೆ ಜಿಹಾದ್ ಯಾಕೆ ಬರುತ್ತೆ – ಇಬ್ರಾಹಿಂ ತಿರುಗೇಟು
Advertisement
Advertisement
ಈ ಕುರಿತು ವಿಜಿಲೆನ್ಸ್ ಅಧಿಕಾರಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕಾರ್ಮಿಕ ಇಲಾಖೆಯ ಹಾಜಿಪುರದ ಬ್ಲಾಕ್ ಮಟ್ಟದ ಅಧಿಕಾರಿ 8 ಕೋಟಿಗೂ ಹೆಚ್ಚು ಮೊತ್ತದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಾಳಿಯ ವೇಳೆ 14 ಎಲ್‍ಐಸಿ ಪಾಲಿಸಿಗಳು, 17 ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‍ಗಳು ಮತ್ತು 25 ಭೂಮಿ ಖರೀದಿ ಒಪ್ಪಂದ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
Advertisement
ಚರ ಮತ್ತು ಸ್ಥಿರ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗಿದೆ. ವಿಶೇಷ ನ್ಯಾಯಾಧೀಶರು, ವಿಜಿಲೆನ್ಸ್, ಪಾಟ್ನಾ ಅವರು ಸರ್ಚ್ ವಾರೆಂಟ್ ಹೊರಡಿಸಿದ ನಂತರ ಈ ದಾಳಿಗಳನ್ನು ನಡೆಸಲಾಯಿತು. ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ನಡೆದ ಅಕ್ರಮ ಆಸ್ತಿ ಪ್ರಕರಣಗಳಲ್ಲಿ ಇದು ಅತಿ ದೊಡ್ಡ ಜಪ್ತಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಯೋಗಿ ಸರ್ಕಾರದಿಂದ ಇಲ್ಲಿಯವರೆಗೆ 15246 ಕಿ.ಮೀ.ಗೂ ಹೆಚ್ಚು ಗ್ರಾಮೀಣ ರಸ್ತೆಗಳನ್ನು ನಿರ್ಮಾಣ