ಹೈದರಾಬಾದ್: ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಕೆಲವು ಫೋಟೋ ಮತ್ತು ವೀಡಿಯೋ ಬಿಡುಗಡೆ ಮಾಡಿದ್ದಕ್ಕೆ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Advertisement
ದೂರಿನ ಆಧಾರದ ಮೇಲೆ ಶಾಸಕ ಎಂ.ರಘುನಂದನ್ ರಾವ್ ಅವರು ಫೋಟೋ ಮತ್ತು ವೀಡಿಯೋ ಕ್ಲಿಪ್ ಹಂಚಿಕೊಳ್ಳುವ ಮೂಲಕ ಅಪ್ರಾಪ್ತೆ ಗುರುತನ್ನು ಬಹಿರಂಗಪಡಿಸಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಐಪಿಸಿಯ ಸೆಕ್ಷನ್ 228-ಎ(ನಿರ್ದಿಷ್ಟ ಅಪರಾಧಕ್ಕೆ ಬಲಿಯಾದ ವ್ಯಕ್ತಿಯ ಗುರುತನ್ನು ಬಹಿರಂಗ ಪಡಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಗ್ಯಾಂಗ್ ರೇಪ್: ಅಪ್ರಾಪ್ತ ಆರೋಪಿ ಫೋಟೋ ರಿಲೀಸ್ – ಬಿಜೆಪಿ ಶಾಸಕನ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Advertisement
Advertisement
ಹೈದರಾಬಾದ್ ಗ್ಯಾಂಗ್ ರೇಪ್‍ಗೆ ಸಂಬಂಧಿಸಿದಂತೆ ಜೂನ್ 4 ರಂದು ಎಂ.ರಘುನಂದನ್ ಸುದ್ದಿಗೋಷ್ಠಿ ನಡೆಸಿದ್ದರು. ಎಐಎಂಐಎಂ ಶಾಸಕರೊಬ್ಬರ ಪುತ್ರ ಸಹ ಈ ಗ್ಯಾಂಗ್ ರೇಪ್‍ನಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಿದ್ದರು. ಈ ಹೇಳಿಕೆಯನ್ನು ಸಾಬೀತುಪಡಿಸಲು ತಮ್ಮ ಬಳಿ ಹೆಚ್ಚಿನ ಸಾಕ್ಷಿಗಳಿವೆ ಎಂದು ಹೇಳಿದ್ದರು. ವೀಡಿಯೋದಲ್ಲಿ ಅಪ್ರಾಪ್ತನ ಜೊತೆಗೆ ಸಂತ್ರಸ್ತೆ ಸಹ ಇರುವುದು ಕಂಡುಬಂದಿದೆ. ಅದಕ್ಕೆ ಪ್ರತಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿತ್ತು.