ಲಕ್ನೋ: ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ವೈನ್ ಬಾಟಲ್‍ಗಳನ್ನು ತುಂಬಿದ್ದ ಬಾಕ್ಸ್ ಕಳುವಾಗಿದ್ದು, ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
Advertisement
ಹೆಡ್ ಕಾನ್‌ಸ್ಟೇಬಲ್ ತಾರೇಶ್ ಶರ್ಮಾ ವಿರುದ್ಧ ಐಪಿಸಿ ಸೆಕ್ಷನ್ 409ರಡಿ ಎಸ್‍ಪಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಮದುವೆ ಆಗುವುದಾಗಿ ನಂಬಿಸಿ ವಂಚನೆ- ಸಿಸಿಎಫ್ ಮೇಲೆ ದೂರು
Advertisement
12 ವಿವಿಧ ಪ್ರಕರಣಗಳಲ್ಲಿ ಸುಮಾರು 578 ವೈನ್ ಬಾಕ್ಸ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸರ್ಕಲ್ ಇನ್‍ಸ್ಪೆಕ್ಟರ್ ಪ್ರದೀಪ್ ಸಿಂಗ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು. ವಶಕ್ಕೆ ಪಡೆದ ವೈನ್ ಬಾಕ್ಸ್ ಜವಾಬ್ದಾರಿಯನ್ನು ತಾರೇಶ್ ಶರ್ಮಾ ಅವರಿಗೆ ವಹಿಸಲಾಗಿತ್ತು. ಇದನ್ನೂ ಓದಿ: ಲಾಕಪ್‍ನಿಂದ ತಪ್ಪಿಸಿಕೊಂಡವ ಠಾಣೆಯ ಪಕ್ಕದಲ್ಲಿದ್ದ ನದಿಗೆ ಹಾರಿ ಪ್ರಾಣ ಬಿಟ್ಟ
Advertisement
Advertisement
ಮಹಿಳಾ ಹೆಡ್ ಕಾನ್‌ಸ್ಟೇಬಲ್ ವರ್ಗಾವಣೆಯಾದಾಗ ಈ ಘಟನೆ ಬೆಳಕಿಗೆ ಬಂದಿದೆ. ತೆರವಾಗಿದ್ದ ಸ್ಥಾನಕ್ಕೆ ಬರುವ ಅಧಿಕಾರಿಗೆ ವೈನ್ ಬಾಕ್ಸ್ ಹಸ್ತಾಂತರಿಸುವಾಗ ಈ ಪ್ರಕರಣ ಬೆಳಕಿಗೆ ಬಂದಿದೆ.