ಬೆಂಗಳೂರು: ಕನ್ನಡ ಭಾಷೆ ಕುರಿತು ನಟ ಕಮಲ್ ಹಾಸನ್ (Kamal Haasan) ನೀಡಿದ್ದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರನ್ನು ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ (ACJM) ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.
2025ರ ಮೇ ತಿಂಗಳಲ್ಲಿ ‘ಥಗ್ ಲೈಫ್’ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ʼತಮಿಳು ಭಾಷೆಯೇ ಕನ್ನಡ ಭಾಷೆಯ ತಾಯಿʼ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಜ್ಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿತ್ತು.ಇದನ್ನೂ ಓದಿ: 11 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಬಂಗಾಳ ಪೊಲೀಸರ ಎನ್‌ಕೌಂಟರ್‌ಗೆ ಆರೋಪಿ ಬಲಿ
ಈ ಸಂಬಂಧ ಮೊದಲು ಕನಕಪುರ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿತ್ತು. ಆದರೆ ಇತ್ತೀಚೆಗೆ ಕಮಲ್ ಹಾಸನ್ ತಮಿಳುನಾಡಿನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆ, ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ.ಇದನ್ನೂ ಓದಿ: ದಾವಣಗೆರೆಯಲ್ಲಿ ಇಲ್ಲ ಮಳೆ; ಮೈದುಂಬಿ ಹರಿದ ತುಂಗಭದ್ರಾ – ಉಕ್ಕಡಗಾತ್ರಿ ಸ್ನಾನಘಟ್ಟ, ಅಂಗಡಿಗಳು ಜಲಾವೃತ
