– ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಎಫ್‌ಐಆರ್ ದಾಖಲು
ಅಹಮದಾಬಾದ್: ಭಾರತದಲ್ಲಿ ಆರಂಭವಾಗುವುದು ವಿಶ್ವಕಪ್ ಕ್ರಿಕೆಟ್ ಅಲ್ಲ (World Cup Cricket) ಅದು World Terror Cup (ವಿಶ್ವ ಭಯೋತ್ಪಾದನಾ ಕಪ್) ಎಂದು ಸಿಖ್ ಫಾರ್ ಜಸ್ಟಿಸ್ ಸಂಘಟನೆಯ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಬೆದರಿಕೆ ಹಾಕಿದ್ದಾನೆ. ಈ ಬೆದರಿಕೆ ಹಿನ್ನೆಲೆಯಲ್ಲಿ ಆತನ ವಿರುದ್ಧ ಗುಜರಾತಿನ ಅಹಮದಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Advertisement
ವಿಶ್ವಕಪ್ ಕ್ರಿಕೆಟ್ ಗುರಿಯಾಗಿಸಿಕೊಂಡು ಪನ್ನುನ್ ಆಡಿಯೋ ಸಂದೇಶ ಬಿಡುಗಡೆ ಮಾಡಿದ್ದಾನೆ. ಅಕ್ಟೋಬರ್ 5 ರಿಂದ ಭಾರತದಲ್ಲಿ (India) ವಿಶ್ವಕಪ್ ಕ್ರಿಕೆಟ್ ಆರಂಭವಾಗಲಿದೆ. ಆದರೆ ಅಕ್ಟೋಬರ್ 5 ರಿಂದ ತನ್ನ ಸಂಸ್ಥೆಯು ವಿಶ್ವ ಭಯೋತ್ಪಾದಕ ಕಪ್ ಅನ್ನು ಪ್ರಾರಂಭಿಸಲಿದೆ ಎಂದು ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ಏನಿದು ಖಲಿಸ್ತಾನ್ ಚಳುವಳಿ? – ಇದಕ್ಕೂ ಭಾರತ-ಕೆನಡಾ ಬಿಕ್ಕಟ್ಟಿಗೂ ಏನು ಸಂಬಂಧ?
Advertisement
Advertisement
ಅಷ್ಟೇ ಅಲ್ಲದೇ ಆಡಿಯೋದಲ್ಲಿ ನಿಜ್ಜರ್ ಹತ್ಯೆಗೆ ಪ್ರತೀಕಾರವಾಗಿ ಅಹಮದಾಬಾದ್ ಸ್ಟೇಡಿಯಂ ಮೇಲೆ ದಾಳಿ ನಡೆಸಲಾಗುವುದು ಎಂದು ಹೇಳಿದ್ದಾನೆ. ಕಳೆದ ಕೆಲ ದಿನಗಳಿಂದ ದೇಶಾದ್ಯಂತ ಹಲವು ಜನರ ಮೊಬೈಲ್‌ಗಳಿಗೆ ಪನ್ನುನ್ ಹೆಸರಿನಲ್ಲಿ ವಿದೇಶಿ ಸಂಖ್ಯೆಯಿಂದ ಆಡಿಯೋ ಕರೆ ಬರುತ್ತಿರುವ ಹಿನ್ನೆಲೆಯಲ್ಲಿ ಈಗ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಭಾರತವನ್ನು ಶತ್ರು ರಾಷ್ಟ್ರವೆಂದು ನಾಲಿಗೆ ಹರಿಬಿಟ್ಟ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ
Advertisement
ಸಿಖ್ಖರು ಮತ್ತು ದೇಶದ ಇತರ ಸಮುದಾಯಗಳ ನಡುವೆ ದ್ವೇಷವನ್ನು ಸೃಷ್ಟಿಸಲು ಮತ್ತು ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪನ್ನುನ್ ಪ್ರಯತ್ನಿಸುತ್ತಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ.
ಕೆನಡಾದಲ್ಲಿ ನೆಲೆಸಿರುವ ಖಲಿಸ್ತಾನಿ ಉಗ್ರ (Khalistani Terrorist) ಗುರುಪತ್‌ವಂತ್ ಸಿಂಗ್ ಪನ್ನುನ್ ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದು ಭಾರತದಲ್ಲಿ ಹೊಂದಿದ್ದ ಆಸ್ತಿಯನ್ನು ರಾಷ್ಟ್ರೀಯ ತನಿಖಾ ದಳ (NIA) ಮುಟ್ಟುಗೋಲು ಹಾಕಿದೆ. ಕಳೆದ ವಾರ ಚಂಡಿಗಢ ಮತ್ತು ಅಮೃತಸರದಲ್ಲಿ ಪನ್ನುನ್ ಹೊಂದಿದ್ದ ಆಸ್ತಿಯನ್ನು ಎನ್‌ಐಎ ಜಪ್ತಿ ಮಾಡಿತ್ತು.
Web Stories