ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಖ್ಯಸ್ಥೆ ರೇಖಾ ಶರ್ಮಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಟಿಎಂಸಿ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಶರ್ಮಾ ಅವರ ದೂರಿನ ಆಧಾರದ ಮೇಲೆ ಹೊಸ ಕ್ರಿಮಿನಲ್ ಕಾನೂನಿನ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 79 ಅಡಿಯಲ್ಲಿ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್‌ನಲ್ಲಿ 2 ಅಂತಸ್ತಿನ ಕಟ್ಟಡ ಕುಸಿತ – ಮೂವರು ಸಾವು, 3 ಮಂದಿಗೆ ಗಾಯ
Advertisement
Advertisement
ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಆರೋಪದಲ್ಲಿ ಪಶ್ಚಿಮ ಬಂಗಾಳದ ಕೃಷ್ಣನಗರದ ಸಂಸದೆ ಮೊಯಿತ್ರಾ ಅವರನ್ನು ಅನರ್ಹಗೊಳಿಸಲಾಗಿತ್ತು. ನಂತರ ಈಚೆಗೆ ನಡೆದ ಚುನಾವಣೆಯಲ್ಲಿ ಸುಮಾರು 56,000 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
Advertisement
Advertisement
ಗುರುವಾರ ಮಹಿಳಾ ಆಯೋಗದ ವೀಡಿಯೊಗಳಿಗೆ ಪ್ರತಿಕ್ರಿಯೆಯಾಗಿ ಹೇಳಿಕೆ ನೀಡಿದ್ದರು. ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಶುಕ್ರವಾರದ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಲು ಕೋರಿತ್ತು. ಇದನ್ನೂ ಓದಿ: BMW ಡಿಕ್ಕಿ ಹೊಡೆದು ಮಹಿಳೆ ಸಾವು – ಸಿಎಂ ಏಕನಾಥ್ ಶಿಂಧೆ ಬಣದ ನಾಯಕನ ಪುತ್ರ ಆರೋಪಿ