ಹಾಸನ: ಯುವತಿಯನ್ನು ಚುಡಾಯಿಸಿದ್ದಾನೆ ಎಂದು ಆರೋಪಿಸಿ ಯುವಕನೊಬ್ಬನನ್ನು ನಿನ್ನೆ ಬಟ್ಟೆಬಿಚ್ಚಿ ಥಳಿಸಿದ್ದ ಪ್ರಕರಣ ಹಾಸನದ ಹೇಮಾವತಿ ಪ್ರತಿಮೆ ಬಳಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ವಿರುದ್ಧ ಕೇಸ್ ದಾಖಲಾಗಿದೆ.
ಪಾರ್ಕ್‍ನಲ್ಲಿ ಕುಳಿತಿದ್ದ ಕಾಲೇಜು ಯುವತಿಯನ್ನು ಯುವಕನೊಬ್ಬ ಕೈಹಿಡಿದು ಎಳೆದಿದ್ದಾನೆ ಎಂದು ಆರೋಪಿಸಲಾಗಿತ್ತು. ಇದನ್ನು ಪ್ರಶ್ನೆ ಮಾಡಿದ ಸಾರ್ವಜನಿಕರ ಜೊತೆಯೂ ಯುವಕ ಗಲಾಟೆ ಮಾಡಿದ್ದಾನೆ ಎಂದು ಆರೋಪಿಸಿ ಹಿಗ್ಗಾಮುಗ್ಗ ಥಳಿಸಿ, ಯುವಕನ ಬೆತ್ತಲೆ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಯುವಕ ತಾನು ತಪ್ಪು ಮಾಡಿಲ್ಲ ಎಂದು ಬೇಡಿಕೊಂಡಿದ್ದ.
Advertisement
Advertisement
ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರು ತಾವೇ ಕಾನೂನು ಕೈಗೆತ್ತಿಕೊಂಡ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಯುವಕ, ಯುವತಿಯನ್ನು ಚುಡಾಯಿಸಿದ್ದರೆ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬೇಕಿತ್ತು. ಅದನ್ನು ಬಿಟ್ಟು ಈ ರೀತಿ ಬೆತ್ತಲೆ ಮಾಡಿ ಮೆರವಣಿಗೆ ಮಾಡುವುದು ಅಮಾನವೀಯ ಎಂಬ ಮಾತು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಹಾಸನ ಪೆÇಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ದರೋಡೆ ಸಮಯ ಕಿಚಡಿ ಮಾಡಿ ಸಿಕ್ಕಿಬಿದ್ದ ಕಳ್ಳ