ಹೈದರಾಬಾದ್: ಇತ್ತೀಚೆಗೆ ಸಣ್ಣ-ಪುಟ್ಟ ವಿಚಾರಕ್ಕೆಲ್ಲ ಮದುವೆಗಳು ಮುರಿದಿರುವುದನ್ನು ನಾವು ಕಾಣುತ್ತೇವೆ. ಅಂತೆಯೇ ಹೈದರಾಬಾದ್‍ನಲ್ಲಿ ವರನೊಬ್ಬ ತನಗೆ ವಧು ಕಡೆಯವರು ವರದಕ್ಷಿಣೆ ಎಂದು ಹಳೆಯ ಬೆಡ್ (Old Bed) ನೀಡಿದ್ದಕ್ಕೆ ಮದುವೆಯನ್ನೇ ಕ್ಯಾನ್ಸಲ್ (Marriage Cancel) ಮಾಡಿಕೊಂಡ ಪ್ರಸಂಗ ನಡೆದಿದೆ.
ಇತ್ತ ಮದುವೆ ಮುರಿದ ವರನ ವಿರುದ್ಧ ವಧುವಿನ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವರ ಮೋಸ (Groom Cheating) ಮಾಡಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ನೀಡದ್ದಕ್ಕೆ ಮಹಿಳೆಗೆ ಆ್ಯಸಿಡ್ ಕುಡಿಸಿದ ಅತ್ತೆ
ಏನಿದು ಘಟನೆ..?: ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಯುವಕನ ಜೊತೆ ಬಂದ್ಲಗುಡ ನಿವಾಸಿ ಯುವತಿಯ ಮದುವೆ ನಿಶ್ಚಯವಾಗಿತ್ತು. ಅಲ್ಲದೆ ಫೆಬ್ರವರಿ 19 ಕ್ಕೆ ಮದುವೆ ದಿನಾಂಕವೂ ನಿಗದಿಯಾಗಿತ್ತು. ವಿಶೇಷ ಅಂದರೆ ಇಬ್ಬರಿಗೂ ಇದು ಎರಡನೇ ಮದುವೆಯಾಗಿತ್ತು. ಈ ಹಿನ್ನೆಲೆಯಲ್ಲಿ ಹಳೆಯ ಪೀಠೋಪಕರಣಗಳನ್ನು ವರದಕ್ಷಿಣೆಯಾಗಿ ನೀಡುವುದಾಗಿ ವಧುವಿನ ತಂದೆ ಮೊದಲೇ ಹೇಳಿದ್ದಾರೆ. ಈ ಎಲ್ಲಾ ಷರತ್ತುಗಳನ್ನು ವರನೂ ಕೂಡ ಒಪ್ಪಿದ್ದು, ಬೆಡ್ ಮಾತ್ರ ಹೊಸದಾಗಿರಬೇಕು ಎಂದು ಹೇಳಿದ್ದನು.
ಇತ್ತ ಮದುವೆ ದಿನ ವಧುವಿನ ಮನೆಯವರು ಪೀಠೋಪಕರಣಗಳನ್ನು ವರನ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಬೆಡ್ ಕೂಡ ಕಳುಹಿಸಿದ್ದು, ಆದರೆ ಬೆಡ್ ಸರಿಪಡಿಲು ಹೋದಾಗ ಅದು ಸ್ವಲ್ಪ ಹರಿದು ಹೋಯಿತು. ಮದುವೆಯ ದಿನದಂದು ವರ ಮತ್ತು ಅವರ ಮನೆಯವರು ಬರಲಿಲ್ಲ. ಇನ್ನು ವಧುವಿನ ಮನೆಯವರು ಅವರ ಮನೆಗೆ ಹೋದಾಗ, ಅವರು ಹಳೆಯ ಹಾಸಿಗೆಯ ಬಗ್ಗೆ ಆಕೆಯ ತಂದೆಗೆ ತಿಳಿಸಿ ಜಗಳವಾಡಿದರು. ಅಲ್ಲದೆ ಅನುಚಿತವಾಗಿ ವರ್ತಿಸಿದರು.
ಮದುವೆಯ ಔತಣಕ್ಕೆ ಸಕಲ ವ್ಯವಸ್ಥೆ ಮಾಡಿ ಬಂಧುಗಳು, ಅತಿಥಿಗಳು ಕಾಯುತ್ತಿದ್ದರು. ಈ ಹಿನ್ನೆಲೆಯಲ್ಲಿ ವರನ ಬಳಿ ಮನವಿ ಮಾಡಿದರೂ ಆತ ಮದುವೆಗೆ ಬರಲು ನಿರಾಕರಿಸಿದ್ದಾನೆ. ಹಳೆಯ ಹಾಸಿಗೆಯನ್ನು ನೀಡಿದ್ದಕ್ಕಾಗಿ ವರ ಸಿಟ್ಟುಮಾಡಿಕೊಂಡಿದ್ದಾನೆ. ಅಲ್ಲದೆ ಹೊಸ ಹಾಸಿಗೆ ತರುವಂತೆ ತಾಕೀತು ಮಾಡಿದ್ದು, ಮದುವೆಯನ್ನೇ ಕ್ಯಾನ್ಸಲ್ ಮಾಡಿಕೊಂಡಿದ್ದಾನೆ.
ಇತ್ತ ವರ ಮದುವೆ ಕ್ಯಾನ್ಸಲ್ ಮಾಡಿಕೊಂಡಿದ್ದಕ್ಕಾಗಿ ವಧುವಿನ ತಂದೆ ಪೊಲೀಸರಿಗೆ ವರ ಮೋಸ ಮಾಡಿರುವುದಾಗಿ ಕಂಪ್ಲೆಂಟ್ ಕೊಟ್ಟಿದ್ದಾರೆ. ಇದನ್ನೂ ಓದಿ: ಪತ್ನಿಯನ್ನು ಕೊಂದು ಬ್ಯಾರಲ್‍ಗೆ ತುಂಬಿದ್ದವ ಅರೆಸ್ಟ್